Sunday, September 20, 2026
Sunday, September 20, 2026

22 ದಿನಗಳ ಬಳಿಕ ಮುಪ್ಪಾನೆ–ಹಲಿಗೆ ಲಾಂಚ್ ಸಂಚಾರ ಪುನರಾರಂಭ

Date:

ಸಾಗರ ತಾಲೂಕಿನ ಮುಪ್ಪಾನೆ–ಹಲಿಗೆ ನಡುವೆ ಸ್ಥಗಿತಗೊಂಡಿದ್ದ ಲಾಂಚ್ ಸಂಚಾರ 22 ದಿನಗಳ ಬಳಿಕ ಪುನರಾರಂಭಗೊಂಡಿದ್ದು, ಜೋಗ–ಸಿಗಂದೂರು ಸಂಪರ್ಕಿಸುವ ಮಾರ್ಗದ ಜನತೆಗೆ ನೆಮ್ಮದಿ ತಂದಿದೆ.

ಹಳೆಯ ಲಾಂಚ್ ಕೆಟ್ಟು ನಿಂತಿದ್ದರೂ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ವಿಳಂಬ ಮಾಡಿದ್ದರಿಂದ ಕರೂರು ಹಾಗೂ ಬಾರಂಗಿ ಹೋಬಳಿಯ ಜನರು ಸುಮಾರು 77 ಕಿ.ಮೀ. ಸುತ್ತುವರಿದು ಸಂಚರಿಸುವ ಪರಿಸ್ಥಿತಿ ಎದುರಾಗಿತ್ತು. ಇದೀಗ ಕಾರವಾರದಿಂದ ಬದಲಿ ಲಾಂಚ್ ತರಿಸಿ ಸೇವೆ ಪುನರಾರಂಭಿಸಲಾಗಿದೆ.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಬದಲಿ ಲಾಂಚ್‌ನಲ್ಲಿ ಪ್ರಯಾಣಿಸಿ ಸೇವೆಯ ಸ್ಥಿತಿಗತಿಗಳನ್ನು ಸ್ವತಃ ಪರಿಶೀಲಿಸಿದರು. ಲಾಂಚ್ ಸಂಚಾರ ಸ್ಥಗಿತಗೊಂಡಿದ್ದರೂ ಪರ್ಯಾಯ ವ್ಯವಸ್ಥೆ ಕಲ್ಪಿಸದ ಸರ್ಕಾರದ ಕ್ರಮದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು.

ಮುಪ್ಪಾನೆ–ಹಲಿಗೆ ಭಾಗದಲ್ಲಿ ಲಾಂಚ್ ಸೇವೆ ಜನರ ದೈನಂದಿನ ಸಂಚಾರಕ್ಕೆ ಪ್ರಮುಖ ಸಂಪರ್ಕವಾಗಿದ್ದು, ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸುಗಮ ಹಾಗೂ ನಿರಂತರ ಲಾಂಚ್ ಸೇವೆ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹರತಾಳು ಹಾಲಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದರು.

22 ದಿನಗಳ ಬಳಿಕ ಲಾಂಚ್ ಸೇವೆ ಪುನರಾರಂಭಗೊಂಡಿರುವುದರಿಂದ ಕರೂರು, ಬಾರಂಗಿ ಹೋಬಳಿಯ ಜನರು ಸಂತಸ ವ್ಯಕ್ತಪಡಿಸಿದ್ದು, ಜನರ ಸಮಸ್ಯೆಗೆ ಸ್ಪಂದಿಸಿದ ಹರತಾಳು ಹಾಲಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...