ಶಿರಾಳಕೊಪ್ಪದಲ್ಲಿ ನಡೆದ ಜಿಲ್ಲಾ ಮಟ್ಟದ ಜೂಡೋ ಕ್ರೀಡಾಕೂಟದಲ್ಲಿ ಸಾಗರದ ಪ್ರಗತಿ ಸಂಯುಕ್ತ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ 5 ಪ್ರಥಮ ಸ್ಥಾನ, 3 ದ್ವಿತೀಯ ಸ್ಥಾನ ಹಾಗೂ 1 ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯ ಮೂಲಕ ಸಾಗರ ತಾಲೂಕಿಗೆ ಕೀರ್ತಿ ತಂದಿದ್ದು, ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಮುಂದಿನ ಹಂತದ ಸ್ಪರ್ಧೆಗಳಲ್ಲೂ ಉತ್ತಮ ಸಾಧನೆ ಮಾಡುವ ವಿಶ್ವಾಸ ವ್ಯಕ್ತಪಡಿಸಲಾಗಿದೆ.
