Monday, September 21, 2026
Monday, September 21, 2026

ವೇದಿಕ್ ಎಕ್ಸ್‌ಪರ್ಟ್ ಸೈನ್ಸ್ ಪಿಯು ಕಾಲೇಜಿನಲ್ಲಿ ವಿಜೃಂಭಣೆಯ ಗುರುವಂದನಾ ಕಾರ್ಯಕ್ರಮ

Date:

ಶಿವಮೊಗ್ಗ ನಗರದ ವೇದಿಕ್ ಎಕ್ಸ್‌ಪರ್ಟ್ ಸೈನ್ಸ್ ಪಿ.ಯು. ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ – 2026 ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮಕ್ಕೆ ಖ್ಯಾತ ಮೋಟಿವೇಷನಲ್ ಸ್ಪೀಕರ್ ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಿ, ಜ್ಞಾನ, ಕೌಶಲ್ಯ, ಸಾಧನೆ, ಬದ್ಧತೆ ಹಾಗೂ ಸಮಯಪಾಲನೆಯ ಮಹತ್ವದ ಕುರಿತು ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು.

ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕಿ ಶ್ರೀಮತಿ ರತ್ನಾಕುಮಾರಿ ಎಸ್. ಸಮಟಗಾರು (ಹೊಸನಗರ) ಹಾಗೂ ಶಿವಮೊಗ್ಗ ಜಿಲ್ಲಾ ಡಿ.ಡಿ.ಪಿ.ಯು. ಶ್ರೀ ಚಂದ್ರಕಾಂತ ಗುಂಡಪಲ್ಲಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಶಿವಮೊಗ್ಗದ ಎಂ.ಎಲ್.ಸಿ. ಶ್ರೀಯುತ ಡಿ.ಎಸ್. ಅರುಣ್ ಅವರು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಕ್ಕಳ ಮನಸ್ಥಿತಿ ಹಾಗೂ ಇಂದಿನ ದಿನಗಳಲ್ಲಿ ಮಕ್ಕಳ ಮೇಲೆ ಮೊಬೈಲ್ ಬಳಕೆಯ ಪರಿಣಾಮಗಳ ಕುರಿತು ಆತಂಕ ವ್ಯಕ್ತಪಡಿಸಿದರು. ಮಕ್ಕಳು ಹೆಚ್ಚಿನ ಸಮಯವನ್ನು ಮೊಬೈಲ್ ಬಳಕೆಯಲ್ಲಿ ಕಳೆಯುತ್ತಿರುವುದರಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಎಚ್ಚರಿಕೆ ನೀಡಿದ ಅವರು, ಮೊಬೈಲ್‌ನ್ನು ಕಲಿಕೆಯ ಉದ್ದೇಶಕ್ಕಾಗಿ ಹಾಗೂ ಉತ್ತಮ ವಿಚಾರಗಳನ್ನು ತಿಳಿದುಕೊಳ್ಳಲು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಗೋಪಾಲಕೃಷ್ಣ (GK) ಶೆಟ್ಟಿ, ನಿರ್ದೇಶಕರಾದ ಶ್ರೀ ಗಣಪತಿ ಮಿರ್ಜಿ, ಪ್ರಾಂಶುಪಾಲರಾದ ಶ್ರೀ ರಾಮ ಶರ್ಮಾ ಹಾಗೂ ಸಲಹೆಗಾರರಾದ ಶ್ರೀ ದೀಪೇಶ್ ಶಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಿವಮೊಗ್ಗದ ವಿವಿಧ ಶಾಲೆಗಳಿಂದ ಆಗಮಿಸಿದ್ದ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...