ಶಿವಮೊಗ್ಗ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ಜಿಲ್ಲಾಮಟ್ಟದ ಆಯ್ಕೆ ಅನುಷ್ಠಾನ ಸಮಿತಿಗೆ 2 ವರ್ಷಗಳ ಅವಧಿಗೆ ಒಟ್ಟು 05 ಜನ ನಾಮನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳಿಂದ 04 ಪುರುಷರು ಹಾಗೂ 01 ಮಹಿಳೆ ಸೇರಿದಂತೆ ಒಟ್ಟು 05 ಜನ ಸದಸ್ಯರನ್ನು ಆಯ್ಕೆ ಮಾಡಲಾಗುತ್ತಿದ್ದು, ಈ ಸಮುದಾಯಗಳಿಗಾಗಿ ಶ್ರಮಿಸಿದ ಸಾಧಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅರ್ಜಿದಾರರು ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಛೇರಿ ಅವಧಿಯಲ್ಲಿ ಅರ್ಜಿಯನ್ನು ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 03-10-2026 ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪ. ಜಾತಿ ಮತ್ತು ಪ. ಪಂಗಡಗಳ ಅಲೆಮಾರಿ ಸಮುದಾಯಗಳ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ
Date:
