ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28 ರಂದು ಬೆಳಿಗ್ಗೆ 10:00 ಗಂಟೆಗೆ ನೇರ ‘ಉದ್ಯೋಗ ಮೇಳ’ವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.
ದಿನಾಂಕ: 28-09-2026 ರಂದು ಬೆಳಿಗ್ಗೆ 10:00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದು
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ 18 ರಿಂದ 35 ವರ್ಷ ಒಳಗಿನ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606 ಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸೆಪ್ಟೆಂಬರ್ 28 ರಂದು ‘ಉದ್ಯೋಗ ಮೇಳ’: ಅರ್ಹ ಅಭ್ಯರ್ಥಿಗಳಿಗೆ ಅವಕಾಶ
Date:
