ರಸ್ತೆಗೆ ಅಡ್ಡಲಾಗಿ ಬಂದ ಹಾವನ್ನು ತಪ್ಪಿಸಲು ಹೋಗಿ ಕಾರೊಂದು ನಿಯಂತ್ರಣ ತಪ್ಪಿ ಚರಂಡಿಗೆ ಧುಮುಕಿದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ. ಸಾಗರದಿಂದ ಆನಂದಪುರದತ್ತ ತೆರಳುತ್ತಿದ್ದ ಮಂಗಳೂರು ಮೂಲದ ಕುಟುಂಬವೊಂದು ಈ ಅಪಘಾತಕ್ಕೆ ಸಿಲುಕಿದೆ. ಕಾರಿನಲ್ಲಿ ದಂಪತಿ ಹಾಗೂ ಮಗು ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಹಾವು ಅಡ್ಡಬಂದ ಹಿನ್ನೆಲೆಯಲ್ಲಿ ಚಾಲಕ ಅದನ್ನು ತಪ್ಪಿಸಲು ಪ್ರಯತ್ನಿಸಿದಾಗ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರಿಗೂ ಯಾವುದೇ ಗಂಭೀರ ತೊಂದರೆ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಹಾವು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕಾರು – ಕ್ಷಣಾರ್ಧದಲ್ಲಿ ತಪ್ಪಿದ ಭಾರೀ ಅನಾಹುತ — ದಂಪತಿ, ಮಗು ಪಾರು
Date:
