ಉತ್ತಮ ಜೀವನಶೈಲಿ ಅಳವಡಿಸಿಕೊಳ್ಳುವ ಮೂಲಕ ಹೃದಯದ ಆರೋಗ್ಯ ಸೇರಿದಂತೆ ಸಮಗ್ರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಡಿ.ವಿ.ಎಸ್. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಡಿ. ಪೂರ್ಣಿಮಾ ಅವರು ಯುವಜನತೆಗೆ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಗಾಂಧಿ ಪಾರ್ಕ್ ಸಮೀಪದ ಡಿ.ವಿ.ಎಸ್. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ “ವಿಶ್ವ ಹೃದಯ ದಿನ” ಹಾಗೂ “ವಿಶ್ವ ರೇಬೀಸ್ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲೇ ಹೆಚ್ಚಿನ ಹೃದಯಾಘಾತ ಸಂಭವಿಸುತ್ತಿದ್ದು, ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಆಟ-ಪಾಠ, ಆಹಾರ ಮತ್ತು ಜೀವನಶೈಲಿಯ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ನಾಯಿ ಕಡಿತ ಹಾಗೂ ಯಾವುದೇ ಪ್ರಾಣಿ ಕಡಿತ ಆದ ತಕ್ಷಣ ಗಾಯವನ್ನು ಸೋಪಿನಿಂದ ತೊಳೆದುಕೊಂಡು ತಕ್ಷಣ ಆಸ್ಪತ್ರೆಗೆ ಹೋಗಿ ಸೂಕ್ತ ಚಿಕಿತ್ಸೆ ಪಡೆಯಬೇ. ಕಡ್ಡಾಯವಾಗಿ ಆಚಿಟಿ ರೇಬಿಸ್ ಲಸಿಕೆ ಪಡೆಯಬೇಕು. ಸರ್ಕಾರದ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯಗಳನ್ನು ಬಳಸಿಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರಾಜ್ ನಾಯ್ಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ರೇಬಿಸ್ ವಿರುದ್ಧ ಪರಿಣಾಮಕಾರಿ ಲಸಿಕೆಯನ್ನು ಕಂಡುಹಿಡಿದ ವಿಜ್ಞಾನಿ ಲೂಯಿಸ್ ಪಾಶ್ಚರ್ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಸೆಪ್ಟೆಂಬರ್ 28 ರಂದು ವಿಶ್ವ ರೇಬೀಸ್ ದಿನವನ್ನು ಆಚರಿಸಲಾಗುತ್ತದೆ.
ರೇಬೀಸ್ ನಾಯಿ ಹಾಗೂ ಇತರೆ ಪ್ರಾಣಿಗಳ ಕಡಿತದಿಂದ ಹರಡುವ ಅಪಾಯಕಾರಿ ಕಾಯಿಲೆಯಾಗಿದ್ದು, ಒಮ್ಮೆ ರೋಗಲಕ್ಷಣಗಳು ಕಾಣಿಸಿಕೊಂಡರೆ 100% ಮಾರಣಾಂತಿಕವಾಗಿದೆ. ನಾಯಿ ಅಥವಾ ಯಾವುದೇ ಪ್ರಾಣಿ ಕಚ್ಚಿದಾಗ ಅಥವಾ ಪರಚಿದಾಗ, ತಕ್ಷಣ ಆ ಗಾಯವನ್ನು ಹರಿಯುವ ನೀರಿನಲ್ಲಿ ಕನಿಷ್ಠ 15 ನಿಮಿಷಗಳ ಕಾಲ ಸೋಪಿನಿಂದ ಚೆನ್ನಾಗಿ ತೊಳೆಯಬೇಕು. ತದನಂತರ ವಿಳಂಬ ಮಾಡದೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದರು.
ಉಚಿತ ಲಸಿಕೆ: ಈ ರೋಗ ತಡೆಗೆ ‘ಎ.ಆರ್.ವಿ’ ಲಸಿಕೆಯು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದ್ದು, ಕಚ್ಚಿದ ತಕ್ಷಣ ಲಸಿಕೆ ಪಡೆಯುವುದರಿಂದ ರೋಗವನ್ನು ಸಂಪೂರ್ಣವಾಗಿ ತಡೆಯಬಹುದು.
ಅಂಕಿ-ಅAಶ ಹಾಗೂ ಶಿವಮೊಗ್ಗದ ಸ್ಥಿತಿಗತಿ: ಜಗತ್ತಿನಲ್ಲಿ ಪ್ರತಿ ವರ್ಷ ಸುಮಾರು 60,000 ಜನರು ಹಾಗೂ ಭಾರತದಲ್ಲಿ 18,000 ದಿಂದ 20,000 ಜನರು ರೇಬೀಸ್‌ಗೆ ಬಲಿಯಾಗುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಜನವರಿ 2026 ರಿಂದ ಆಗಸ್ಟ್ 2026 ರವರೆಗೆ ಒಟ್ಟು 15,019 ನಾಯಿ ಕಡಿತದ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಮರಣ ಹೊಂದಿದ್ದಾರೆ.
ಸ್ಥಳೀಯ ಸಂಸ್ಥೆಗಳ (ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ) ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಸಾಮೂಹಿಕ ಲಸಿಕೆ ಅಭಿಯಾನ ಮತ್ತು ಪಶು ಜನನ ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲೆ-ಕಾಲೇಜುಗಳ ಬಿಸಿಲೂಟದ ತ್ಯಾಜ್ಯ ಬೀದಿ ನಾಯಿಗಳಿಗೆ ಸಿಗದಂತೆ ವಿಲೇವಾರಿ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಹೃದಯ ಸಂಬAಧಿ ಕಾಯಿಲೆಗಳು: ಜಾಗೃತಿ ಮತ್ತು ತಪಾಸಣೆ
ಹೃದಯ ಸಂಬAಧಿ ರೋಗಗಳು ಜಾಗತಿಕವಾಗಿ ತೀವ್ರವಾಗಿ ಹೆಚ್ಚುತ್ತಿದ್ದು, ಜಾಗರೂಕರಾಗಿರುವುದು ಅವಶ್ಯಕ. ಪ್ರಸ್ತುತ ವರ್ಷ ಶಿವಮೊಗ್ಗ ಜಿಲ್ಲೆಯಲ್ಲಿ 355 ಜನರನ್ನು ಪರೀಕ್ಷೆಗೊಳಪಡಿಸಿದ್ದು, 92 ವ್ಯಕ್ತಿಗಳಲ್ಲಿ ಹೃದಯ ಕಾಯಿಲೆ ಇರುವುದು ದೃಢಪಟ್ಟಿದೆ.
ಜಿಲ್ಲೆಯ 3 ತಾಲೂಕುಗಳಲ್ಲಿ ‘SಖಿಇಒI’ – ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಎಲ್ಲಾ ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಎನ್ ಸಿಡಿ ಕ್ಲಿನಿಕ್‌ಗಳನ್ನು ತೆರೆಯಲಾಗಿದೆ. ಕೊರೊನರಿ ಆರ್ಟರಿ ರೋಗ, ಹೃದಯಾಘಾತ, ಹೃದಯ ವೈಫಲ್ಯ ಅಸಮಾನ ಹೃದಯ ಬಡಿತ, ಹಾಗೂ ವಾಲ್ವುಲರ್ ರೋಗಗಳು ಹೃದಯ ಸಂಬAಧಿತ ಹಲವು ರೀತಿಯ ರೋಗಗಳಾಗಿದ್ದು, ಅನಿಯಮಿತ ಆಹಾರ ಪದ್ಧತಿ, ಜಂಕ್ ಫುಡ್ ಸೇವನೆ, ಮಾನಸಿಕ ಒತ್ತಡ, ಧೂಮಪಾನ, ಮದ್ಯಪಾನ, ದೈಹಿಕ ವ್ಯಾಯಾಮದ ಕೊರತೆ ಹಾಗೂ ದೇಹದಲ್ಲಿ ಅತಿಯಾದ ಕೊಬ್ಬಿನಂಶ ಕಾರಣವಾಗಿದೆ. ಎದೆ ನೋವು, ತೀವ್ರ ಉಸಿರಾಟದ ತೊಂದರೆ, ಕೈ/ಭುಜಗಳಲ್ಲಿ ನೋವು, ಹೃದಯ ಬಡಿತದಲ್ಲಿ ಏರಿಳಿತ ಮತ್ತು ಅತಿಯಾದ ಆಯಾಸ ಕಂಡುಬAದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
ಪೌಷ್ಟಿಕ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಯೋಗ/ಧ್ಯಾನ, ಧೂಮಪಾನ-ಮದ್ಯಪಾನ ತ್ಯಜಿಸುವುದು ಮತ್ತು ನಿಯಮಿತ ವೈದ್ಯಕೀಯ ತಪಾಸಣೆ ಅತ್ಯಗತ್ಯ ಎಂದರು
ಕಾರ್ಯಕ್ರಮದಲ್ಲಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಫಿಜಿಷಿಯನ್ ಡಾ. ಹರ್ಷ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು, ಹೃದಯ ಸಂಬAಧಿ ಕಾಯಿಲೆಗಳ ತಡೆ, ಆರೋಗ್ಯಕರ ಜೀವನಶೈಲಿ, ರೇಬೀಸ್‌ನಿಂದ ರಕ್ಷಣೆ ಹಾಗೂ ತುರ್ತು ಲಸಿಕಾ ಕ್ರಮಗಳ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ರೋಗಬಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗುಡದಪ್ಪ ಕಸಬಿ, ವಿಡಿಎಲ್ ಡಿಸಿಎಂಓ ಡಾ. ಹರ್ಷವರ್ಧನ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆರೋಗ್ಯಕರ ಜೀವನಶೈಲಿ ಹಾಗೂ ರೇಬೀಸ್ ಮುಕ್ತ ಸಮಾಜಕ್ಕೆ ಕರೆ : ಡಿ.ಪೂರ್ಣಿಮಾ
Date:
