ಭದ್ರಾವತಿ ತಾಲೂಕು ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ಪತ್ರಿಕಾ ವಿತರಕರ ದಿನಾಚರಣೆ ಹಾಗೂ ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಹಲವು ವರ್ಷಗಳಿಂದ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ವಿತರಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಪತ್ರಿಕೆಗಳನ್ನು ಮುಂಜಾನೆಯೇ ಮನೆಮನೆಗೆ ತಲುಪಿಸುವ ಮೂಲಕ ಓದುಗರಿಗೆ ಸುದ್ದಿಯನ್ನು ತಲುಪಿಸುವಲ್ಲಿ ಪತ್ರಿಕಾ ವಿತರಕರ ಪಾತ್ರ ಮಹತ್ವದ್ದಾಗಿದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕದ ಭದ್ರಾವತಿ ಅಧ್ಯಕ್ಷ ಮಲ್ಲಿಕಾರ್ಜುನ್, ಉಪಾಧ್ಯಕ್ಷ ಸೋಮಶೇಖರ್, ಖಜಾಂಚಿ ಮಧು, ಸಹ ಕಾರ್ಯದರ್ಶಿ ಶಿವಮೂರ್ತಿ, ಪದಾಧಿಕಾರಿಗಳಾದ ಸತ್ಯ, ಮಂಜುನಾಥ್, ಕೃಷ್ಣಮೂರ್ತಿ, ಲೋಕೇಶ್, ದೇವೀಸ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
