Sunday, November 22, 2026
Sunday, November 22, 2026

ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿಗೆ CADA ಕಾರ್ಯ ಮತ್ತಷ್ಟು ಪರಿಣಾಮಕಾರಿಯಾಗಲಿ: ಖಾಲಿ ಹುದ್ದೆ ಭರ್ತಿಗೆ ಸೂಚನೆ – ಸಚಿವ ಚಲುವರಾಯಸ್ವಾಮಿ

Date:

ರಾಜ್ಯದ ನೀರಾವರಿ ಯೋಜನೆಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ನೀರಿನ ಸಮರ್ಪಕ ಬಳಕೆ, ಕೃಷಿ ಉತ್ಪಾದಕತೆ ಹೆಚ್ಚಳ ಹಾಗೂ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಗಳ (CADA) ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಗಳ ನಿರ್ದೇಶನಾಲಯದ ಸಭೆಯು ಸಚಿವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ CADA ಪ್ರಾಧಿಕಾರಗಳ ಕಾರ್ಯನಿರ್ವಹಣೆ, ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ, ನೀರಾವರಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆ, ನೀರಾವರಿ ಬಳಕೆದಾರರ ಸಂಘಗಳ ಬಲವರ್ಧನೆ ಹಾಗೂ ರೈತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ವಿವರವಾಗಿ ಚರ್ಚಿಸಲಾಯಿತು. ಈಗಾಗಲೇ ಕಾಮಗಾರಿ ನಡೆದಿರುವ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಸಚಿವರು ತಿಳಿಸಿದರು.

ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳು ಕೇವಲ ಮೂಲಸೌಕರ್ಯ ನಿರ್ಮಾಣಕ್ಕೆ ಸೀಮಿತವಾಗದೆ, ರೈತರಿಗೆ ನೇರವಾಗಿ ಪ್ರಯೋಜನವಾಗುವ ರೀತಿಯಲ್ಲಿ ಹಾಗೂ ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಪೂರಕವಾಗುವಂತೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.

WUCSಗಳ ಬಲವರ್ಧನೆಗೆ ಒತ್ತು

ನೀರಾವರಿ ಬಳಕೆದಾರರ ಸಂಘಗಳು (WUCS) ಅಚ್ಚುಕಟ್ಟು ಪ್ರದೇಶಗಳ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವುಗಳ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

ನೀರಿನ ಸಮರ್ಪಕ ಹಂಚಿಕೆ ಮತ್ತು ಬಳಕೆಯಲ್ಲಿ ರೈತರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು, ನೀರಿನ ಮಿತವ್ಯಯದ ಬಳಕೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅಚ್ಚುಕಟ್ಟು ಪ್ರದೇಶಗಳ ನಿರ್ವಹಣೆಯಲ್ಲಿ ರೈತರ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಖಾಲಿ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ

CADA ವ್ಯಾಪ್ತಿಯಲ್ಲಿ ಹಲವು ಹುದ್ದೆಗಳು ಖಾಲಿ ಇರುವ ಪರಿಣಾಮ ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ನಿರ್ದೇಶನಾಲಯದ ವ್ಯಾಪ್ತಿಯಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಕುರಿತು ಮುಖ್ಯಮಂತ್ರಿಗಳ ನಿರ್ದೇಶನವೂ ಇರುವ ಹಿನ್ನೆಲೆಯಲ್ಲಿ, ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.

ಕೃಷಿ ಉತ್ಪಾದಕತೆ ಹೆಚ್ಚಳಕ್ಕೆ ಸಮಗ್ರ ಕ್ರಮ

ಅಚ್ಚುಕಟ್ಟು ಪ್ರದೇಶಗಳಲ್ಲಿ ನೀರಾವರಿ ಸೌಲಭ್ಯದ ಜೊತೆಗೆ ಕೃಷಿ ಉತ್ಪಾದಕತೆ ಹೆಚ್ಚಳ, ಸೂಕ್ತ ಬೆಳೆ ಪದ್ಧತಿಗಳ ಉತ್ತೇಜನ ಹಾಗೂ ರೈತರಿಗೆ ಅಗತ್ಯವಿರುವ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಚಿವರು ಹೇಳಿದರು.

ಭೂಮಿಯ ಉತ್ಪಾದಕತೆ ಕುಂಠಿತವಾಗಿರುವ ಪ್ರದೇಶಗಳನ್ನು ಗುರುತಿಸಿ ಭೂಮಿ ಪುನಶ್ಚೇತನ ಕಾರ್ಯಗಳನ್ನು ಕೈಗೊಳ್ಳಬೇಕು. ಅಚ್ಚುಕಟ್ಟು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ಸ್ಥಳೀಯವಾಗಿ ಗುರುತಿಸಿ, ಅಗತ್ಯವಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಸೂಚಿಸಿದರು.

CADA ಪ್ರಾಧಿಕಾರಗಳು ಸಂಬಂಧಿಸಿದ ಇಲಾಖೆಗಳು, ನೀರಾವರಿ ಬಳಕೆದಾರರ ಸಂಘಗಳು ಹಾಗೂ ತಾಂತ್ರಿಕ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ CADA ಪ್ರಾಧಿಕಾರದ ನಿರ್ದೇಶಕರು, ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...

Klive Editorial ಶಿವಮೊಗ್ಗ ಏರ್ ಪೋರ್ಟ್: ಕೇಂದ್ರಕ್ಕೆ ವಹಿಸಿ ಕೈತೊಳೆದು ಕೊಳ್ಳುವುದೇ ಕ್ಷೇಮ

Klive Editorial ಬಹಳ ಪ್ರಮುಖ ವಿಚಾರವೀಗ ಬಿಸಿಬಿಸಿ ಚರ್ಚೆಯ ಬಿಂದುವಾಗಿದೆ.ಶಿವಮೊಗ್ಗೆಗೆ ವಿಮಾನ...

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ...