Wednesday, September 30, 2026
Wednesday, September 30, 2026

ಸೆಪ್ಟೆಂಬರ್ 26 ರಿಂದ ಸಕ್ರೆಬೈಲು ಆನೆ ಬಿಡಾರ ಸಾರ್ವಜನಿಕ ಪ್ರವೇಶಕ್ಕೆ ಪುನರಾರಂಭ: ಪ್ರತಿ ಬುಧವಾರ ರಜೆ

Date:

ದಿನಾಂಕ 18.05.2026 ರಂದು ದುಬಾರೆ ಆನೆ ಶಿಬಿರದಲ್ಲಿ ನಡೆದ ಆಕಸ್ಮಿಕ ದುರ್ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ, ರಾಜ್ಯದಲ್ಲಿರುವ ಎಲ್ಲಾ ಆನೆ ಶಿಬಿರಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಅರಣ್ಯ ಸಚಿವರು ಸೂಚಿಸಿದ್ದರು. ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಕಟ್ಟುನಿಟ್ಟಿನ ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡ ನಂತರವಷ್ಟೇ ಶಿಬಿರಗಳನ್ನು ಪುನರಾರಂಭಿಸಲು ನಿರ್ದೇಶಿಸಲಾಗಿತ್ತು.
ಅರಣ್ಯ ಇಲಾಖೆ ನೀಡಿರುವ ಸುರಕ್ಷತಾ ಮಾರ್ಗಸೂಚಿಗಳಂತೆ ಈಗ ಸಕ್ರೆಬೈಲು ಆನೆ ಬಿಡಾರದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ:
ಪ್ರತ್ಯೇಕ ಮಾರ್ಗಗಳ ವ್ಯವಸ್ಥೆ: ಸಾರ್ವಜನಿಕರಿಗೆ ಮತ್ತು ಆನೆಗಳಿಗೆ ಪ್ರತ್ಯೇಕ ಮಾರ್ಗಗಳನ್ನು ಗುರುತಿಸಲಾಗಿದೆ.
ಸಾರ್ವಜನಿಕರು ಮತ್ತು ಆನೆಗಳ ನಡುವೆ ನೇರ ಸಂಪರ್ಕ ಬಾರದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ.
ಸೂಚನಾ ಫಲಕಗಳು: ಪ್ರವಾಸಿಗರ ಮಾಹಿತಿ ಮತ್ತು ಜಾಗೃತಿಗಾಗಿ ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.
ಈ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪೂರ್ಣಗೊಳಿಸಲಾಗಿದ್ದು, ದಿನಾಂಕ 26.09.2026 ರಿಂದ ಸಕ್ರೆಬೈಲು ಆನೆ ಬಿಡಾರವನ್ನು ಸಾರ್ವಜನಿಕರ ಪ್ರವೇಶಕ್ಕೆ ಅಧಿಕೃತವಾಗಿ ಪುನರಾರಂಭಿಸಲಾಗುವುದು ಹಾಗೂ ಕರ್ನಾಟಕ ಸಾಕಾನೆ ಶಿಬಿರ ಸುರಕ್ಷತಾ ವಿಧಾನದಲ್ಲಿ ವಾರದಲ್ಲಿ ಒಂದು ದಿನ ರಜೆಯನ್ನು ಮಾಡಿ ಶಿಬಿರವನ್ನು ಭೇಟಿದಾರರಿಗೆ ಮುಚ್ಚಬೇಕು ಎಂದು ತಿಳಿಸಿದ್ದು, ಪ್ರತಿ ಬುಧವಾರ ಶಿಬಿರದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿರುವುದಿಲ್ಲ ಎಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...