Friday, October 2, 2026
Friday, October 2, 2026

ಶಿವಮೊಗ್ಗ ದಸರಾಗೆ ಅನುದಾನ, ರದ್ದಾದ ಸಮುದಾಯ ಭವನಗಳ ಅನುದಾನ ಮರುಮಂಜೂರಿಗೆ ಶಾಸಕ ಚನ್ನಬಸಪ್ಪ ಮನವಿ

Date:

ಶಿವಮೊಗ್ಗ ನಗರದ ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ವಿಶೇಷ ಆರ್ಥಿಕ ಅನುದಾನ ಬಿಡುಗಡೆ ಮಾಡಬೇಕು ಹಾಗೂ ನಗರದಲ್ಲಿ ಈ ಹಿಂದೆ ರದ್ದುಪಡಿಸಲಾಗಿದ್ದ ಹಿಂದುಳಿದ ವರ್ಗಗಳ ಸಮುದಾಯ ಭವನಗಳ ಅನುದಾನವನ್ನು ಪುನಃ ಮಂಜೂರು ಮಾಡಬೇಕು ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಸಭೆಯ ನಿಮಿತ್ತ ಬೆಂಗಳೂರು ಭೇಟಿಯ ಸಂದರ್ಭದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ತಂಗಡಗಿ ಅವರನ್ನು ಖುದ್ದು ಭೇಟಿ ಮಾಡಿ ಶಾಸಕರು ಮನವಿ ಪತ್ರ ಸಲ್ಲಿಸಿದರು.

ಭೇಟಿಯ ವೇಳೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ವಿವಿಧ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...