Friday, October 2, 2026
Friday, October 2, 2026

ವಿಭಾಗ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಕರಾಟೆ ಅಸೋಸಿಯೇಷನ್ ವಿದ್ಯಾರ್ಥಿಗಳ ಸಾಧನೆ

Date:

ತುಮಕೂರು,ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ದಿನಾಂಕ 29 ರಂದು ವಿಭಾಗ ಮಟ್ಟದ ಕರಾಟೆ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ವತಿಯಿಂದ ಆಯೋಜಿಸಲಾದ ಈ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ 7 ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ, ಅದರಲ್ಲಿ ಕುಮಟೆ ವಿಭಾಗದಲ್ಲಿ ಮೊದಲನೇ ಸ್ಥಾನವನ್ನು ಪಡೆದ ವಿಧ್ಯಾರ್ಥಿಗಳೆಂದರೆ ದೀಕ್ಷಾ. ಯು ಮತ್ತು ಮಧುಶ್ರೀ.ಆರ್ ಹಾಗೂ ಎರಡನೇ ಸ್ಥಾನವನ್ನು ಪಡೆದ ಶೀತಲ್ ಮತ್ತು ಕಥ ವಿಭಾಗದಲ್ಲಿ ಎರಡನೇ ಸ್ಥಾನವನ್ನು ಪಡೆದ ಮಧುಶ್ರೀ.ಆರ್ ಈ ವಿಧ್ಯಾರ್ಥಿಗಳು ಪದಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.

ಪಂದ್ಯಾವಳಿಯಲ್ಲಿ ಪದಕಗಳನ್ನು ಗಳಿಸಿದ ಎಲ್ಲಾ ವಿಜೇತ ವಿದ್ಯಾರ್ಥಿಗಳಿಗೆ ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹ ನಿರ್ದೇಶಕರಾದ ಶ್ರೀಯುತ ರೇಖಾ ನಾಯಕ್ ಅವರು ಅಭಿನಂದನೆ ಸಲ್ಲಿಸಿ, ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶುಭ ಹಾರೈಸಿದರು.

ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ಮುಂದಿನ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಮುಂದಿನ ಹಂತದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತರಲಿ ಎಂದು ಹಾರೈಸಲಾಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ಶ್ರೀಯುತ ನವೀನ್, ಉಪಾಧ್ಯಕ್ಷರಾದ ಶ್ರೀಯುತ ಸಾಧಿಕ್, ಖಜಾಂಚಿಗಳಾದ ಶ್ರೀಯುತ ಮಂಜುನಾಥ್ ಹಾಗೂ ಅಸೋಸಿಯೇಷನ್‌ನ ಎಲ್ಲಾ ಪದಾಧಿಕಾರಿಗಳು ಪದಕ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು.

ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮತ್ತು ಪರಿಶ್ರಮದ ಮೂಲಕ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್‌ನ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...