ಉಡುಪಿಯ ಶಮ್ಮಿರಾಜ್ ಶೆಟ್ಟಿ ಎಂಬ 51 ವರ್ಷದ ವ್ಯಕ್ತಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಟೆಂಡರ್ ಕೆಲಸ ಮಾಡಿಕೊಂಡಿದ್ದು, ಸೆ. 01 ರಿಂದ ಕಾಣೆಯಾಗಿದ್ದಾರೆ.
ಕಾಣೆಯಾದ ವ್ಯಕ್ತಿ 5.7 ಅಡಿ ಎತ್ತರ, ದಪ್ಪ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ದಪ್ಪ ಮೀಸೆ ಬಿಟ್ಟಿರುತ್ತಾರೆ. ಕನ್ನಡ, ತುಳು, ಹಿಂದಿ, ಇಂಗ್ಲೀಷ್ ಭಾಷೆ ಮಾತಾಡುತ್ತಾರೆ.
ಈ ವ್ಯಕ್ತಿಯ ಬಗ್ಗೆ ಸುಳಿವು ದೊರೆತಲ್ಲಿ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9480803345 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ವ್ಯಕ್ತಿ ಕಾಣೆ : ಮಾಹಿತಿ ನೀಡಲು ಮನವಿ
Date:
