Friday, October 2, 2026
Friday, October 2, 2026

24 ವರ್ಷಗಳ ಸೇನಾ ಸೇವೆ ಬಳಿಕ ತವರಿಗೆ ಮರಳಿದ ಇಬ್ಬರು ಯೋಧರಿಗೆ ಅದ್ಧೂರಿ ಸ್ವಾಗತ

Date:

ಭಾರತೀಯ ಸೇನೆಯಲ್ಲಿ 24 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ ಬಂದ ಇಬ್ಬರು ಯೋಧರಿಗೆ ಕುಟುಂಬದವರು, ಸ್ನೇಹಿತರು, ಮಾಜಿ ಯೋಧರು ಅದ್ಧೂರಿ ಸ್ವಾಗತ ನೀಡಿದರು. ರೈಲ್ವೆ ನಿಲ್ದಾಣದಲ್ಲಿ ಇಂದು ರಾತ್ರಿ ಬೆಂಗಳೂರು – ತಾಳಗುಪ್ಪ ರೈಲಿನಲ್ಲಿ ಇಬ್ಬರು ಯೋಧರು ತವರಿಗೆ ಮರಳಿದರು. ಯೋಧರು ರೈಲಿನಿಂದ ಇಳಿಯುತ್ತಿದ್ದಂತೆ ಕುಟುಂಬದವರು, ಸ್ನೇಹಿತರು ಘೋಷಣೆ ಕೂಗಿದರು. ಡೊಳ್ಳು ಬಾರಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸ್ವಾಗತಿಸಿದರು. ಭಾರತೀಯ ಸೇನೆಯಲ್ಲಿ 24 ವರ್ಷ ಸೇವೆ ಸಲ್ಲಿಸಿ ಇಬ್ಬರು ಯೋಧರು ತವರಿಗೆ ಮರಳಿದ್ದಾರೆ. ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಜಿ.ಮಧುಸೂದನ್‌, ರಾಷ್ಟ್ರಭಕ್ತರ ಬಳಗದ ಕಾಂತೇಶ್‌ ಈಶ್ವರಪ್ಪ, ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ಶಿವಕುಮಾರ್‌.ಡಿ.ಎಸ್‌, ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಅಧ್ಯಕ್ಷ ಎನ್‌.ಮಂಜುನಾಥ್‌, ಕಾರ್ಯದರ್ಶಿ ನಾಗರಾಜ್‌ ನೇರಿಗೆ, ಹಿರಿಯ ಪತ್ರಕರ್ತರಾದ ಜೇಸುದಾಸ್‌, ಗಣೇಶ್‌ ನಾವುಡ, ಗಂಗಾಧರ್‌.ಎ, ಶಿವಮೊಗ್ಗ ನಾಗರಾಜ್‌, ರಘು, ಕೊಟ್ರೇಶ್‌ ಸೇರಿ ಹಲವರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...