Sunday, November 22, 2026
Sunday, November 22, 2026

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Date:

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ ಯುವಜನರಿಗೆ ಇಂದು ಸಾಕಷ್ಟು ಅವಕಾಶಗಳಿವೆ. ವನ್ಯಜೀವಿ ಮತ್ತು ಜೀವವೈವಿಧ್ಯತೆಯ ಸಂರಕ್ಷಣೆಗೆ ಸರ್ಕಾರವನ್ನು ಅವಲಂಬಿಸದೆ, ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಈ ಕ್ಷೇತ್ರಗಳನ್ನು ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಸಂರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದು ಖ್ಯಾತ ವನ್ಯಜೀವಿ ಸಂರಕ್ಷಕ ಸಮದ್ ಕೊಟ್ಟೂರು ಕರೆ ನೀಡಿದರು.

ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗ ಹಾಗೂ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿ ವಲಯದ ಸಹಯೋಗದಲ್ಲಿ ಸೋಮವಾರ ಪ್ರಾರಂಭವಾದ ‘ವನ್ಯಜೀವಿ ಸಪ್ತಾಹ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕುಲಸಚಿವ ಪ್ರೊ. ಆರ್. ತಿಮ್ಮರಾಯಪ್ಪ ಮಾತನಾಡಿ, ದೇಶದ ಅರಣ್ಯ ಮತ್ತು ವನ್ಯಜೀವಿ ಕ್ಷೇತ್ರದಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದರು. ವಿದ್ಯಾರ್ಥಿಗಳು ಯುಪಿಎಸ್‌ಸಿ ಮೂಲಕ ಭಾರತೀಯ ಅರಣ್ಯ ಸೇವೆ (IFS) ಹಾಗೂ ಕೆಪಿಎಸ್‌ಸಿ ಮೂಲಕ ಕರ್ನಾಟಕ ಅರಣ್ಯ ಸೇವೆ ಸೇರಿದಂತೆ
ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಸ್ಪರ್ಧಿಸಿ ವನ್ಯಜೀವಿ ಸಂರಕ್ಷಣೆಯನ್ನು ವೃತ್ತಿಜೀವನದ ಒಂದು ಪ್ರಮುಖ ಕ್ಷೇತ್ರವಾಗಿ ಪರಿಗಣಿಸುವಂತೆ ಕರೆ ನೀಡಿದರು.

ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಅಧ್ಯಕ್ಷ ಪ್ರೊ. ವಿಜಯಕುಮಾರ ಮಾತನಾಡಿ, ವನ್ಯಜೀವಿ ಸಂರಕ್ಷಣೆ ಕೇವಲ ಅರಣ್ಯ ಇಲಾಖೆ ಅಥವಾ ಕೆಲವೇ ಕೆಲವು ಸಂಘ-ಸಂಸ್ಥೆಗಳ ಹೊಣೆಗಾರಿಕೆಯಲ್ಲ. ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಭವಿಷ್ಯದ ವನ್ಯಜೀವಿ ಸಂರಕ್ಷಣೆಗೆ ಬಲ ದೊರೆಯಲಿದೆ ಎಂದು ಅಭಿಪ್ರಾಯಪಟ್ಟರು.

ಸೂಕ್ಷ್ಮಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಬಿ. ತಿಪ್ಪೇಸ್ವಾಮಿ ಮಾತನಾಡಿ, “ಆವಾಸ ಸ್ಥಾನದ ಸಂಪರ್ಕ, ಸಮೃದ್ಧ ವನ್ಯಜೀವಿ” ಎಂಬ ಈ ವರ್ಷದ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಆಶಯವನ್ನು ಉಲ್ಲೇಖಿಸಿಸುತ್ತಾ, ವನ್ಯಜೀವಿಗಳ ಉಳಿವಿಗೆ ಸೂಕ್ತ ಆವಾಸಸ್ಥಾನಗಳ ಸಂರಕ್ಷಣೆ ಹಾಗೂ ಅವುಗಳ ನಡುವಿನ ಸಂಪರ್ಕವನ್ನು ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿ ವಲಯದ ವಲಯ ಅರಣ್ಯಾಧಿಕಾರಿ ಶ್ರೀ ಸಂತೋಷ್ ಸುರಿಮಠ ಹಾಗೂ ಉಪ ವಲಯ ಅರಣ್ಯಾಧಿಕಾರಿ ಶ್ರೀ ಪರಶುರಾಮ್ ಸಿ. ಎಸ್, ಪರಿಸರ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಬಸವರಾಜಪ್ಪ, ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಅಧ್ಯಕ್ಷ ಡಾ. ಎಚ್. ಎಸ್. ಶ್ರೀಶೈಲ, ಸೇರಿದಂತೆ ವಿಶ್ವವಿದ್ಯಾಲಯದ ಅಧ್ಯಾಪಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಅರಿವು ಜಾಥಾ: ವನ್ಯಜೀವಿ ಸಪ್ತಾಹದ ಅಂಗವಾಗಿ ಜೀವವಿಜ್ಞಾನ ವಿಭಾಗಗಳ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ವನ್ಯಜೀವಿ ಸಂರಕ್ಷಣಾ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡರು. ವನ್ಯಜೀವಿ ಮತ್ತು ಅವುಗಳ ಆವಾಸಸ್ಥಾನಗಳ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಥಾ ನಡೆಸಲಾಯಿತು.

Kuvempu University ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ಪ್ರದರ್ಶಿಸಿದ ‘ಒನ್ ಹೆಲ್ತ್’ (One Health) ಪರಿಕಲ್ಪನೆಯನ್ನು ಆಧರಿಸಿದ ಬೀದಿ ನಾಟಕವು ಕಾರ್ಯಕ್ರಮದ ಮತ್ತೊಂದು ಪ್ರಮುಖ ಆಕರ್ಷಣೆಯಾಗಿದ್ದು, ಮಾನವ ಆರೋಗ್ಯ, ಪ್ರಾಣಿಗಳ ಆರೋಗ್ಯ ಮತ್ತು ಪರಿಸರದ ಆರೋಗ್ಯ ಪರಸ್ಪರ ಸಂಬಂಧ ಹೊಂದಿವೆ ಎಂಬ ಸಂದೇಶವನ್ನು ಸಾರಿತು.

ಅ. 5 ರಿಂದ 9 ರವರೆಗೆ ನಡೆಯಲಿರುವ ವನ್ಯಜೀವಿ ಸಪ್ತಾಹದಲ್ಲಿ ವಿದ್ಯಾರ್ಥಿಗಳು, ಸಂಶೋಧಕರು, ಅಧ್ಯಾಪಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಒಳಗೊಂಡಂತೆ ವಿವಿಧ ವಿಶೇಷ ಉಪನ್ಯಾಸಗಳು ಮತ್ತು ಸಂರಕ್ಷಣಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...

Klive Editorial ಶಿವಮೊಗ್ಗ ಏರ್ ಪೋರ್ಟ್: ಕೇಂದ್ರಕ್ಕೆ ವಹಿಸಿ ಕೈತೊಳೆದು ಕೊಳ್ಳುವುದೇ ಕ್ಷೇಮ

Klive Editorial ಬಹಳ ಪ್ರಮುಖ ವಿಚಾರವೀಗ ಬಿಸಿಬಿಸಿ ಚರ್ಚೆಯ ಬಿಂದುವಾಗಿದೆ.ಶಿವಮೊಗ್ಗೆಗೆ ವಿಮಾನ...

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ...