Tuesday, October 6, 2026
Tuesday, October 6, 2026

ಶಿಕಾರಿಪುರ ಶಾಹಿ ಗಾರ್ಮೆಂಟ್ಸ್‌ಗೆ ಭೇಟಿ: ಕಾರ್ಮಿಕರ PF–ESI ಸಮಸ್ಯೆಗಳಿಗೆ ಅಧಿಕಾರಿಗಳಿಂದ ಸ್ಪಷ್ಟನೆ

Date:

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಾಹಿ ಗಾರ್ಮೆಂಟ್ಸ್‌ಗೆ ಖುದ್ದು ಭೇಟಿ ನೀಡಿದ ಸಂದರ್ಭದಲ್ಲಿ, ಗಾರ್ಮೆಂಟ್ಸ್ ಕಾರ್ಮಿಕರು ಹಾಗೂ ಹೆಣ್ಣುಮಕ್ಕಳಿಗೆ ಸಂಬಂಧಿಸಿದ PF ಮತ್ತು ESI ವಿಚಾರಗಳ ಕುರಿತು ಉಂಟಾಗಿದ್ದ ಗೊಂದಲ ಹಾಗೂ ಆತಂಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಾಯಿತು.

ಸಭೆಯಲ್ಲಿ ಕಾರ್ಮಿಕ ಇಲಾಖೆ, PF ಮತ್ತು ESI ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದು, ಕಾರ್ಮಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿದರು.

ಈ ವೇಳೆ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಹೆಣ್ಣುಮಕ್ಕಳ ಕುಶಲೋಪರಿ ವಿಚಾರಿಸಿ, PF ಹಾಗೂ ESI ನಿಯಮಗಳಿಗೆ ಸಂಬಂಧಿಸಿದಂತೆ ಕಾರ್ಮಿಕರು ಕೇಳಿದ ವಿವಿಧ ಪ್ರಶ್ನೆಗಳಿಗೆ ಅಧಿಕಾರಿಗಳಿಂದಲೇ ನೇರವಾಗಿ ಸ್ಪಷ್ಟನೆ ಕೊಡಿಸಲಾಯಿತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕಾರ್ಮಿಕರ ವೇತನ, ಸಾಮಾಜಿಕ ಭದ್ರತೆ, ಸುರಕ್ಷತೆ ಮತ್ತು ಕಲ್ಯಾಣಕ್ಕೆ ಒತ್ತು ನೀಡುವ ಹಲವು ಕಾರ್ಮಿಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಮತ್ತು ಸುಧಾರಣೆಗಳ ಪ್ರಯೋಜನಗಳು ಪ್ರತಿಯೊಬ್ಬ ಕಾರ್ಮಿಕನಿಗೂ ತಲುಪುವಂತೆ ಪಾರದರ್ಶಕ ಹಾಗೂ ಜನಸ್ನೇಹಿ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಲಾಯಿತು.

ಕಾರ್ಮಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಲಾಯಿತು.

ಸಭೆಯಲ್ಲಿ PF ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಜೀಸೆನಾ, PF ಜಾರಿ ಅಧಿಕಾರಿಯಾದ ಶ್ರೀ ರವೀಂದ್ರ, ESI ವ್ಯವಸ್ಥಾಪಕರಾದ ಶ್ರೀಮತಿ ಆಶಾ ದೇವಿ, ESI SSO ಶ್ರೀ ಪ್ರಿಯಾನ್ಶು ಚೌಧರಿ ಹಾಗೂ ಕಾರ್ಮಿಕ ಅಧಿಕಾರಿ ಶ್ರೀ ರಘುನಾಥ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ, ಸೂಕ್ತ ಮಾರ್ಗದರ್ಶನ ಹಾಗೂ ಸ್ಪಷ್ಟನೆ ನೀಡಿದ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದಗಳನ್ನು ಸಲ್ಲಿಸಲಾಯಿತು.

ಕಾರ್ಮಿಕರ ಹಕ್ಕುಗಳು, ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂತಹ ಸಭೆಗಳು ಮಹತ್ವ ಪಡೆದುಕೊಂಡಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...