Tuesday, October 6, 2026
Tuesday, October 6, 2026

ರಕ್ತದಾನದಂತಹ ಪುಣ್ಯದ ಕೆಲಸ ಮತ್ತೊಂದಿಲ್ಲ: ಡಾ. ಆರ್.ಡಿ. ಪ್ರಭು

Date:

ರಕ್ತದಾನಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ರಕ್ತದಾನದಂತಹ ಪುಣ್ಯದ ಕೆಲಸ ಮತ್ತೊಂದಿಲ್ಲ. ರಕ್ತದಾನ ಮಾಡುವುದರಿಂದ ಅಮೂಲ್ಯವಾದ ಜೀವಗಳನ್ನು ಉಳಿಸುವ ಮಹತ್ಕಾರ್ಯ ಮಾಡಿದಂತಾಗುತ್ತದೆ. ಮೂಢನಂಬಿಕೆಗಳಿಂದ ಹೊರಬಂದು ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸದೃಢ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ. ಆರ್.ಡಿ. ಪ್ರಭು ಹೇಳಿದರು.

ಮಾನಸಾಧಾರ ಟ್ರಸ್ಟ್ ಹಾಗೂ ಮಾನಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಡಾ. ಅಶೋಕ್ ಪೈ ಅವರ ಸ್ಮರಣಾರ್ಥ ಹಾಗೂ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ಮಾನಸ ಆಧಾರ ಸಂಸ್ಥೆಯಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಡಾ. ಅಶೋಕ್ ಪೈ ಅವರು ತಮ್ಮ ವೃತ್ತಿಯ ಜೊತೆಗೆ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ್ದರು. ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನಮಾನಸದಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿದ್ದಾರೆ ಎಂದು ಅವರು ಸ್ಮರಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ಅಧ್ಯಕ್ಷ ಡಾ. ಶ್ರೀಧರ್ ಮಾತನಾಡಿ, ಡಾ. ಅಶೋಕ್ ಪೈ ಅವರು ವೈದ್ಯಕೀಯ ಕ್ಷೇತ್ರ ಮಾತ್ರವಲ್ಲದೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಅಪರೂಪದ ವ್ಯಕ್ತಿಯಾಗಿದ್ದರು. ಸಮಾಜಕ್ಕೆ ಅವರ ಕೊಡುಗೆ ಅಪಾರವಾಗಿದೆ. ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ತಮ್ಮ ಆರೋಗ್ಯದ ಕಾಳಜಿ ವಹಿಸುವುದರ ಜೊತೆಗೆ ಮತ್ತೊಬ್ಬರ ಜೀವ ಉಳಿಸುವ ಪುಣ್ಯವನ್ನು ಸಂಪಾದಿಸಬಹುದು ಎಂದರು.

ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ರವೀಶ್ ಮಾತನಾಡಿ, ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಜನರಲ್ಲಿ ಜಾಗೃತಿ ಮೂಡಿಸುತ್ತವೆ. ನಿಯಮಿತವಾಗಿ ರಕ್ತದಾನ ಮಾಡುವುದರಿಂದ ದೇಹದ ಆರೋಗ್ಯದ ಮೇಲೂ ಉತ್ತಮ ಪರಿಣಾಮ ಬೀರುತ್ತದೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯ ಹಾಗೂ ಜೀವನಶೈಲಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ಪ್ರೀತಿ ಪೈ, ಡಾ. ವಾಮನ್ ಶಾನಭೋಗ್, ಡಾ. ರಿಷಿ, ಮಾನಸ ಆಧಾರ ಸಂಸ್ಥೆಯ ಸಿಇಒ ಡಾ. ಪ್ರವೀಣ್, ಡಾ. ಉಷಾ ಪ್ರಭು, ಮಾನಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಅಧ್ಯಕ್ಷೆ ಡಾ. ರಜನಿ ಎ. ಪೈ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ. ವಿಜಯಕುಮಾರ್, ಡಾ. ದಿನಕರ್, ರೆಡ್‌ಕ್ರಾಸ್ ಸಂಸ್ಥೆಯ ನಿರ್ದೇಶಕ ಮಂಜು ಅಪ್ಪಾಜಿ, ಡಾ. ರಾಜೇಶ್ವರಿ, ಮಂಜುನಾಥ ಸ್ವಾಮಿ, ಪದ್ಮಿನಿ ಸೇರಿದಂತೆ ರಕ್ತದಾನಿಗಳು, ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...