Tuesday, October 6, 2026
Tuesday, October 6, 2026

ಶಿವಮೊಗ್ಗದಲ್ಲಿ ವನ್ಯಜೀವಿ ಸಪ್ತಾಹಕ್ಕೆ ಚಾಲನೆ: 1300ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭಾಗಿ

Date:

ಶಿವಮೊಗ್ಗದಲ್ಲಿ 2026ನೇ ಸಾಲಿನ ವನ್ಯಜೀವಿ ಸಪ್ತಾಹಕ್ಕೆ ಅದ್ದೂರಿ ಚಾಲನೆ ನೀಡಲಾಯಿತು.

ಅಕ್ಟೋಬರ್ 2ರಂದು ಶಿವಮೊಗ್ಗ ವನ್ಯಜೀವಿ ವಿಭಾಗ ಹಾಗೂ ಶ್ರೀ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ವನ್ಯಜೀವಿ ಸಪ್ತಾಹದ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ಹಂತದ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.

ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಟಿ. ಹನುಮಂತಪ್ಪ, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕೃಷ್ಣ ಪಟಗಾರ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ. ಲೋಹಿತ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಿ.ಬಿ. ಗುರುರಾಜ್ ಹಾಗೂ ಆದಿಚುಂಚನಗಿರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ವಿ. ಗುರುರಾಜ್ ಸೇರಿದಂತೆ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಶಿವಮೊಗ್ಗ ವೃತ್ತ ವ್ಯಾಪ್ತಿಯ ಸುಮಾರು ಹತ್ತು ತಾಲೂಕುಗಳ ವಿವಿಧ ಪ್ರೌಢಶಾಲೆಗಳ 9ನೇ ಮತ್ತು 10ನೇ ತರಗತಿಯ 1300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವನ್ಯಜೀವಿ ಸಂರಕ್ಷಣೆ, ಪರಿಸರದ ಮಹತ್ವ ಹಾಗೂ ವಿದ್ಯಾರ್ಥಿಗಳಲ್ಲಿ ವನ್ಯಜೀವಿಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...