ಸಾಗರ ತಾಲೂಕಿನ ಮುಂಬಾಳು ಗ್ರಾಮದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಡ್ರೀಮ್ ಬಸ್‌ನಲ್ಲಿ ಬೆಳಗ್ಗೆ 5.45ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಚಾಲಕ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಕಿಯ ತೀವ್ರತೆಗೆ ಬಸ್ ಶೇ.80ರಷ್ಟು ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮುಂಬಾಳು ಗ್ರಾಮದಲ್ಲಿ ಘಟನೆ ನಡೆದಿದೆ.
