ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದಲ್ಲಿ ಹೆಜ್ಜೇನುಗಳ ದಾಳಿಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ರೈತನನ್ನು ಮಲವಗೊಪ್ಪದ ತಿಮ್ಮನಾಯ್ಕ (65) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ತಮ್ಮದೇ ಹೊಲದಲ್ಲಿ ಕಟಾವು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿವೆ. ಈ ದಾಳಿಯಿಂದ ತಿಮ್ಮನಾಯ್ಕ ಅವರು ಸ್ಥಳದಲ್ಲೇ ತೀವ್ರವಾಗಿ ಅಸ್ವಸ್ಥಗೊಂಡಿದ್ದರು.
ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ರೈತನ ಸಾವಿನಿಂದ ಕುಟುಂಬಸ್ಥರು ದುಃಖಿತರಾಗಿದ್ದು, ಸರ್ಕಾರವು ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
