ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 1 ಲಕ್ಷದ 10 ಸಾವಿರ ರೂಪಾಯಿ ದಂಡ ಹಾಗೂ ಸಂತ್ರಸ್ತ ಬಾಲಕಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಶಿವಮೊಗ್ಗದ ಫಾಸ್ಟ್‌ಟ್ರ್ಯಾಕ್ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಮಗ್ರ ತನಿಖೆ ನಡೆಸಿದ್ದ ಪಿಐ ಮಂಜುನಾಥ್ ಬಿ. ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಬಿ. ಪಾಟೀಲ್ ಅವರು ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷದ 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಇನ್ನು ಸಂತ್ರಸ್ತ ಬಾಲಕಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯದ ಈ ತೀರ್ಪು ಮಹತ್ವದ್ದಾಗಿದೆ.
ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 1 ಲಕ್ಷದ 10 ಸಾವಿರ ರೂಪಾಯಿ ದಂಡ ಹಾಗೂ ಸಂತ್ರಸ್ತ ಬಾಲಕಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಶಿವಮೊಗ್ಗದ ಫಾಸ್ಟ್‌ಟ್ರ್ಯಾಕ್ ವಿಶೇಷ ನ್ಯಾಯಾಲಯ ಆದೇಶಿಸಿದೆ.
ವಾಯ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಮಗ್ರ ತನಿಖೆ ನಡೆಸಿದ್ದ ಪಿಐ ಮಂಜುನಾಥ್ ಬಿ. ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.