ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾಡಹಬ್ಬ ದಸರಾ ಉದ್ಘಾಟನೆಗೂ ಮುನ್ನ ಧರ್ಮಪತ್ನಿ ಉಷಾ ಹಾಗೂ ಕೊಪ್ಪಳದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರ ಜತೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ನಾಡಿನ ಹಾಗೂ ಜನರ ಒಳಿತಿಗೆ ಪ್ರಾರ್ಥಿಸಿದರು.