Sunday, October 11, 2026
Sunday, October 11, 2026

ಕೋಟೆ ಚಂಡಿಕಾದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವಕ್ಕೆ ಚಾಲನೆ

Date:

ಶಿವಮೊಗ್ಗ ನಗರದ ಗ್ರಾಮದೇವತೆ ಕೋಟೆ ಶ್ರೀ ಚಂಡಿಕಾದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ ಆರಂಭಗೊಂಡಿರುವ ಪವಿತ್ರ ಶರನ್ನವರಾತ್ರಿ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಪಾಲ್ಗೊಂಡು, ಅಮ್ಮನವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಸ್ತ ನಾಡಿನ ಜನತೆಗೆ ದೇವಿಯ ಅನುಗ್ರಹ ಲಭಿಸಲಿ ಎಂದು ಪ್ರಾರ್ಥಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಕನ್ನಡ ಚಲನಚಿತ್ರ ನಟ ಶ್ರೀನಾಥ್, ಶಾಸಕ ಚನ್ನಬಸಪ್ಪ, ದೇವಸ್ಥಾನದ ಸಮಿತಿಯ ಸದಸ್ಯರು, ಗಣ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

ಅಮ್ಮನವರ ಕೃಪಾಶೀರ್ವಾದದಿಂದ ಎಲ್ಲರ ಬದುಕಿನಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಬಿ.ವೈ. ರಾಘವೇಂದ್ರ ಅವರು ಹಾರೈಸಿದರು. ಇದೇ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಶರನ್ನವರಾತ್ರಿ ಹಬ್ಬದ ಶುಭಾಶಯಗಳನ್ನು ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...