Monday, October 12, 2026
Monday, October 12, 2026

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

Date:

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್‌ ಅವರು ಚಾಲನೆ ನೀಡಿದರು. 

ಮೈಸೂರು ನಗರದ ಸಯ್ಯಾಜಿರಾವ್‌ ರಸ್ತೆಯಲ್ಲಿರುವ ಹಸಿರು ಚಪ್ಪರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ದಸರಾ ವಿದ್ಯುತ್‌ ದೀಪಾಲಂಕಾರಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ವತಿಯಿಂದ ದಸರಾ ದೀಪಾಲಂಕಾರ ಮಾಡಲಾಗಿದ್ದು, ಕಳೆದ ವರ್ಷಕ್ಕಿಂತಲೂ ಹೆಚ್ಚು ಆಕರ್ಷಣೀಯವಾಗಿ ಈ ಬಾರಿಯ ದೀಪಾಲಂಕಾರ ಕಂಗೊಳಿಸಲಿದೆ‌. ಈ ನಿಟ್ಟಿನಲ್ಲಿ ಎಲ್ಲರೂ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳುವ ಮೂಲಕ ದಸರೆಯನ್ನು ಆನಂದಿಸಬಹುದಾಗಿದ್ದು, ಇಂದಿನಿಂದ‌ 21 ದಿನಗಳ ಕಾಲ ಸ್ಥಳೀಯರು ಹಾಗೂ ಪ್ರವಾಸಿಗರು ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಬಹುದಾಗಿದೆ‌ ಎಂದರು.

4 ದಿನ ಡ್ರೋನ್ ಶೋ: ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಡ್ರೋನ್ ಪ್ರದರ್ಶನ ಈ ಬಾರಿ ಮತ್ತಷ್ಟು ವರ್ಣರಂಜಿತವಾಗಿರಲಿದ್ದು, ರಾಷ್ಟೀಯ ಪಕ್ಷಿ ನವಿಲಿನ ಆಕೃತಿಗೆ 3500 ಡ್ರೋನ್ ಬಳಸಿಕೊಂಡು ಗಿನ್ನಿಸ್ ರೆಕಾರ್ಡ್ ಗೆ ಮುಂದಾಗಿದ್ದು, ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅ.17, 18, 20 ಮತ್ತು 21 ರಂದು ರಾತ್ರಿ 8 ಗಂಟೆಗೆ ಡ್ರೋನ್ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

146 ಕಿಮೀ ದೀಪಾಲಂಕಾರ:
ದಸರಾ ಹಿನ್ನೆಲೆಯಲ್ಲಿ ಈ ಬಾರಿ ನಗರದ 199 ರಸ್ತೆಗಳ 146 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 123 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಇದರೊಂದಿಗೆ ನಗರದ ಪ್ರಮುಖ ಕಡೆಗಳಲ್ಲಿ ಎಲ್ಇಡಿ ಬಲ್ಬ್ ಗಳಿಂದ ನಿರ್ಮಿಸಲಾದ 80 ವಿವಿಧ ಪ್ರತಿಕೃತಿಗಳನ್ನು ಇರಿಸಲಾಗಿದೆ. ನಿಗದಿಯಂತೆ ಅ.11 ರಿಂದ ಅ.31 ರವರೆಗೆ ವಿದ್ಯುತ್ ದೀಪಾಲಂಕಾರ ನಡೆಯಲಿದೆ.

Mysuru Dasara ದಸರಾ ದೀಪಾಲಂಕಾರದ ಹಿನ್ನೆಲೆಯಲ್ಲಿ ಇಡೀ ಮೈಸೂರು ನಗರ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿದೆ. ಪ್ರಮುಖವಾಗಿ ಅರಮನೆ ಸುತ್ತಲಿನ ರಸ್ತೆಗಳು ಸೇರಿದಂತೆ ಸಯ್ಯಾಜಿರಾವ್‌ ರಸ್ತೆ,ಇರ್ವಿನ್ ರಸ್ತೆ, ಅಲ್ಬರ್ಟ್‌ ವಿಕ್ಟರ್‌ ರಸ್ತೆ, ಜೆಎಲ್‌ಬಿ ರಸ್ತೆ, ಚಾಮರಾಜ ಜೋಡಿರಸ್ತೆ, ಹೊರ ವಲಯದಲ್ಲಿನ ಪ್ರಮುಖ ಹೆದ್ದಾರಿಗಳಿಗೂ ದೀಪಾಲಂಕಾರ ಮಾಡಲಾಗಿದೆ. ನಗರ ವ್ಯಾಪ್ತಿಯಲ್ಲಿರುವ ಪ್ರಮುಖ ವೃತ್ತಗಳಿಗೂ ಆಕರ್ಷಕ ದೀಪಾಲಂಕಾರ ಮಾಡಲಾಗಿದೆ. ಇದಲ್ಲದೆ ದೊಡ್ಡಕೆರೆ ಮೈದಾನ, ಕೆ.ಆರ್‌.ವೃತ್ತ, ಚಾಮರಾಜ ವೃತ್ತ, ಜಯಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ರೈಲ್ವೆ ನಿಲ್ದಾಣ ಸಮೀಪ, ಗನ್‌ಹೌಸ್‌, ಎಲ್‌ಐಸಿ ವೃತ್ತ ಸೇರಿದಂತೆ ವಿವಿಧೆಡೆ ಹಲವು ಕಲಾಕೃತಿಗಳನ್ನು ನಿರ್ಮಿಸಲಾಗಿದೆ.

ಈ ಸಂದರ್ಭದಲ್ಲಿ ಶಾಸಕ ತನ್ವೀರ್ ಸೇಠ್, ಶಾಸಕರು ಹಾಗೂ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಅರ್ಚನಾ ಎಂ.ಎಸ್ ಸೇರಿದಂತೆ ಸೆಸ್ಕ್ ಅಧಿಕಾರಿಗಳು ಮತ್ತು ಉಪ ಸಮಿತಿ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...