Monday, October 12, 2026
Monday, October 12, 2026

ಶಿವಮೊಗ್ಗ ನಗರಪಾಲಿಕೆ ಆಯುಕ್ತರನ್ನ ಅಮಾನತು‌ ಮಾಡಿ : ಹೆಚ್.ಸಿ.ಯೋಗೀಶ್ ಆಗ್ರಹ

Date:

ಶಿವಮೊಗ್ಗ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೂರ್ಣ ‘ವಂದೇ ಮಾತರಂ’ ಗೀತೆ ಗಾಯನದ ವಿಚಾರವಾಗಿ ವಿವಾದ ಮುಂದುವರಿದಿದೆ. ಸರ್ಕಾರದ ಆದೇಶದಂತೆ ಎರಡು ಚರಣಗಳನ್ನು ಮಾತ್ರ ಹಾಡಬೇಕಿತ್ತು, ಆದರೆ ನಿಯಮ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಸಿ. ಯೋಗೀಶ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದ ಅವರು, ಪಾಲಿಕೆ ಆಯುಕ್ತರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ), ಶಿವಮೊಗ್ಗ ದಸರಾ ಅದ್ಧೂರಿಯಾಗಿ ಆರಂಭವಾಗಿದ್ದು, 11 ದಿನಗಳ ಕಾಲ ಸಾಂಸ್ಕೃತಿಕ ಉತ್ಸವಗಳು ನಡೆಯಲಿವೆ ಎಂದರು. ದಸರಾ ಕಾರ್ಯಕ್ರಮವನ್ನು ಬಹಿಷ್ಕರಿಸುವವರ ಕುರಿತು ಮಾತನಾಡಿ
ಸರ್ಕಾರದ ಆದೇಶದಂತೆ ಎರಡು ಚರಣ ಹಾಡು ರೆಕಾರ್ಡ್ ಹಾಕಿ ನಿಲ್ಲಿಸಿದರು. ಆದರೆ ಜನ ಮಿಕ್ಕ ಚರಣಗಳನ್ನ ಹಾಡಿದರು. ಜನಮನದ ಹಾಡು ವಂದೇ ಮಾತರಂ . ಇದನ್ನ ವಿರೋಧಿಸಿದವರಿಗೆ ತಾಯಿ ದುರ್ಗೆ ಒಳ್ಳೆ ಬುದ್ಧಿ ಕೊಡಲಿ ಎಂದು ಪ್ರತಿಕ್ರಿಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...