ರೈತರಿಗೆ ಎಕರೆಗೆ 25ರಿಂದ 30 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಶಿವಮೊಗ್ಗ ತಾಲೂಕಿನ ತ್ಯಾಜುವಳ್ಳಿ ಗ್ರಾಮದಲ್ಲಿ ಒಣಗಿದ ಮೆಕ್ಕೆಜೋಳ ಬೆಳೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಹಾಗೂ ವೈಜ್ಞಾನಿಕವಾಗಿ ಬೆಳೆ ನಷ್ಟದ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಜಾನುವಾರುಗಳಿಗೆ ಮೇವು ಬ್ಯಾಂಕ್ ಆರಂಭಿಸಿ, ರೈತರ ಸಾಲ ಮನ್ನಾ ಮಾಡಬೇಕು. ಸರ್ಕಾರ ತಕ್ಷಣ ರೈತರ ನೆರವಿಗೆ ಧಾವಿಸದಿದ್ದರೆ ವಿಧಾನಸೌಧದ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
