Tuesday, October 13, 2026
Tuesday, October 13, 2026

ಅರ್ಧ ದಿನ ಸಾಹಿತ್ಯ ಸಮ್ಮೇಳನವನ್ನೇ ನಡೆಸೋಣ : ಎಸ್.ಎನ್.ಚನ್ನಬಸಪ್ಪ

Date:

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾದ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ಸಾಹಿತ್ಯಾಸಕ್ತರನ್ನು ಆಕರ್ಷಿಸುವ ಮೂಲಕ ವಿಶಿಷ್ಟವಾಗಿ ಗಮನ ಸೆಳೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಖ್ಯಾತ ಕವಿ ಹಾಗೂ ಸಾಹಿತಿ ಡುಂಡಿರಾಜ್ ಅವರು, ಸಾಹಿತ್ಯ ಸಂಭ್ರಮದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ ಎಂದು ತಿಳಿಸಿದರು. ತಮ್ಮ ಹಾಸ್ಯಭರಿತ ಮಾತುಗಳು ಹಾಗೂ ಹನಿಗವನಗಳ ಮೂಲಕ ಸಭಿಕರನ್ನು ರಂಜಿಸಿದ ಅವರು, ಮಹಾನಗರ ಪಾಲಿಕೆ ಆಯೋಜಿಸಿರುವ ಇಂತಹ ವಿಶಿಷ್ಟ ಕಾರ್ಯಕ್ರಮವು ಶಿವಮೊಗ್ಗದ ಜನತೆಗೆ ಸಾಹಿತ್ಯದ ಸಂಭ್ರಮವನ್ನು ನೀಡಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಚನ್ನಬಸಪ್ಪ ಅವರು, ಈ ಬಾರಿಯ ಸಾಹಿತ್ಯ ಸಂಭ್ರಮವು ವಿಭಿನ್ನವಾಗಿ ಮೂಡಿಬಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಆಕರ್ಷಿಸುತ್ತಿರುವುದು ಸಂತಸ ತಂದಿದೆ ಎಂದರು. ಮುಂದಿನ ದಿನಗಳಲ್ಲಿ ಅರ್ಧ ದಿನದ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದರೂ ಮಹಾನಗರ ಪಾಲಿಕೆ ಸೂಕ್ತ ಸಹಕಾರ ನೀಡಲು ಸಿದ್ಧವಿದೆ ಎಂದು ತಿಳಿಸಿದರು. ಪುಸ್ತಕ ಬಿಡುಗಡೆ, ಭಜನಾ ಕಾರ್ಯಕ್ರಮ, ಕವಿಗೋಷ್ಠಿ ಹಾಗೂ ಜಾನಪದ ಕಲಾವಿದ ಗುಡ್ಡಪ್ಪ ಜೋಗಿ ಅವರ ಜೋಗಿ ಪದಗಳು ಜನರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ನಿಮ್ಮನ್ನೆಲ್ಲೋ ನೋಡಿದ್ದೇನೆ, ಶ್ರೀನಿವಾಸ ಮೂರ್ತಿ ಅವರ ದೇವಾಲಯಕ್ಕೆ ದಾರಿ ಹಾಗೂ ಶುಭ ಕುಸ್ಕೂರ್ ಅವರ ಮನದಾಸೆ ಕೃತಿಗಳನ್ನು ಬಿಡುಗಡೆ ಮಾಡಲಾಯಿತು.

ಪ್ರಖ್ಯಾತ ಜಾನಪದ ಕಲಾವಿದ ಗುಡ್ಡಪ್ಪ ಜೋಗಿ ಹಾಗೂ ಸಂಗಡಿಗರಿಂದ ಜೋಗಿ ಪದಗಳ ಗಾಯನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ಪ್ರೇಕ್ಷಕರನ್ನು ವಿಶೇಷವಾಗಿ ಆಕರ್ಷಿಸಿತು. ಸಾಹಿತಿ ಡುಂಡಿರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ 27 ಕವಿಗಳು ಭಾಗವಹಿಸಿ ತಮ್ಮ ಕವನಗಳನ್ನು ವಾಚಿಸಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ದಸರಾ ಸಮಿತಿಯ ಕಾರ್ಯದರ್ಶಿ ಸಿದ್ದಪ್ಪ, ಕಂದಾಯ ಅಧಿಕಾರಿ ವೇಣುಗೋಪಾಲ್, ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಎಚ್.ಎಂ. ಮಧು ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಜಿ. ವಿಜಯಕುಮಾರ್ ಅವರಿಂದ ಪ್ರಾರ್ಥನೆ ನೆರವೇರಿತು. ವೇಣುಗೋಪಾಲ್ ಅವರು ಸ್ವಾಗತಿಸಿದರು. ಕಾರ್ಯಕ್ರಮದ ರೂವಾರಿ ಎಂ.ಎನ್. ಸುಂದರ್ ರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮುಂದಿನ ದಿನಗಳಲ್ಲಿ ಶಿವಮೊಗ್ಗ ದಸರಾವನ್ನು ಇನ್ನಷ್ಟು ವೈಭವದಿಂದ ಆಚರಿಸುವ ಆಶಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ಆಯೋಜನೆಗೆ ಸಹಕರಿಸಿದ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು.

ಕವಿ ಡುಂಡಿರಾಜ್, ಜಾನಪದ ಕಲಾವಿದ ಗುಡ್ಡಪ್ಪ ಜೋಗಿ ಹಾಗೂ ಎಂ.ಎನ್. ಸುಂದರ್ ರಾಜ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ರಂಗಾ ಮೆಲೋಡಿಸ್ ತಂಡ ಹಾಗೂ ಸಹನಾ ತಂಡದವರಿಂದ ಸುಮಧುರ ಗೀತೆಗಳು ಮತ್ತು ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.

ಕುಮಾರಿ ಪ್ರಿಯಾಂಕ ರಾಯ್ಕರ್ ಹಾಗೂ ಚನ್ನಬಸಪ್ಪ ನ್ಯಾಮತಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...