Karnataka Science and Technology ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ “ಸುಸ್ಥಿರ ಅಭಿವೃದ್ಧಿಗಾಗಿ ನಿರ್ಣಾಯಕ ಖನಿಜಗಳ ಮೌಲ್ಯ ಸರಪಳಿ” ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ನ. 4 ಮತ್ತು 5 ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಕಚೇರಿ, ಬೆಂಗಳೂರು ಇಲ್ಲಿ ಆಯೋಜಿಸಲಾಗಿದೆ.
ಈ ವಿಚಾರ ಸಂಕಿರಣದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು, ತಾಂತ್ರಿಕ ಉಪನ್ಯಾಸಕರು, ಉದ್ಯಮಿಗಳು, ಸಂಶೋಧಕರು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ. ನಿರ್ಣಾಯಕ ಖನಿಜಗಳ ಸಂಗ್ರಹಣೆ, ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಯುವ ವಿಜ್ಞಾನಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಪೋಸ್ಟರ್ ಅಥವಾ ಸಂಶೋಧನಾ ಪ್ರಬಂಧಗಳನ್ನು ಸಲ್ಲಿಸುವ ಮೂಲಕ ವಿಚಾರ ಸಂಕಿರಣದಲ್ಲಿ ಭಾಗವಹಿಸಬಹುದು. ಪ್ರಬಂಧ ಸಲ್ಲಿಕೆ ಹಾಗೂ ನೋಂದಣಿಗೆ ಅ. 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ 9620767819 ಅಥವಾ 9743084194 ಸಂಪರ್ಕಿಸಬಹುದು. ನೋಂದಣಿ ಮತ್ತು ಇತರ ವಿವರಗಳನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವೆಬ್ಸೈಟ್ kstacademy.in ನಲ್ಲಿ ಪಡೆಯಬಹುದು.
Karnataka Science and Technology ನವೆಂಬರ್ 4 & 5 ರಂದು “ಮಹತ್ವದ ಖನಿಜ ಮೌಲ್ಯ ಸರಪಳಿ ” ಸಮಾವೇಶ. ಆಸಕ್ತರಿಗೆ ಪ್ರಬಂಧ ಮಂಡನೆಗೆ ಅವಕಾಶ
Date:
