Wednesday, October 14, 2026
Wednesday, October 14, 2026

ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಂದ ಸರಳ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Date:

2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಅಭ್ಯರ್ಥಿಗಳಿಂದ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 50,000/- ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ : ವಧು, ವರರು ಜಿಲ್ಲಾ ನೋಂದಣಿ/ ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ಗಳು, ದೇವಸ್ಥಾನ ಟ್ರಸ್ಟ್ಗಳು, ಸಂಘ, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 5,000/-ಗಳನ್ನು ನೀಡಲಾಗುವುದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಈ ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ 3 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸುವುದು. ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು. ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 5 ಜೋಡಿಗಳು ಭಾಗವಹಿಸಿರತಕ್ಕದ್ದು, ವಧುವಿಗೆ ಕನಿಷ್ಠ 18 ವರ್ಷದಿಂದ 42 ವರ್ಷಗಳು, ವರನಿಗೆ ಕನಿಷ್ಠ 21 -45 ವರ್ಷ ವಯಸ್ಸು ಆಗಿರತಕ್ಕದ್ದು. ವಧುವರರ ವಾರ್ಷಿಕ ಆದಾಯವು ರೂ. 2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ 5.00 ಲಕ್ಷಗಳನ್ನು ಮೀರತಕ್ಕದ್ದಲ್ಲ. ಈ ಸೌಲಭ್ಯವನ್ನು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ನೀಡೊಲಾಗುವುದು. ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆ ಅನ್ವಯಿಸುವುದಿಲ್ಲ
ಆಸಕ್ತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-220206ನ್ನು ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...