Wednesday, October 14, 2026
Wednesday, October 14, 2026

ಕರ್ನಾಟಕ ಮಿದುಳು ಆರೋಗ್ಯ ಉಪಕ್ರಮದಡಿ ಗುತ್ತಿಗೆ ಆಧಾರದ ಹುದ್ದೆಗಳಿಗೆ ನೇರ ಸಂದರ್ಶನ

Date:

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ವತಿಯಿಂದ ‘ಕರ್ನಾಟಕ ಮಿದುಳು ಆರೋಗ್ಯ ಉಪಕ್ರಮ’ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ ಹಾಗೂ ವಿದ್ಯಾರ್ಹತೆ:
ನ್ಯೂರಾಲಜಿಸ್ಟ್ – 1 ಹುದ್ದೆ: ಡಿ.ಎಂ. ಅಥವಾ ಡಿ.ಎನ್.ಬಿ. ನ್ಯೂರಾಲಜಿ ವಿದ್ಯಾರ್ಹತೆಗೆ ಮಾಸಿಕ ವೇತನ ರೂ. 1,50,000/-, ಹಾಗೂ ಎಂ.ಡಿ/ಡಿ.ಎನ್.ಬಿ. ಜನರಲ್ ಮೆಡಿಸಿನ್ ವಿದ್ಯಾರ್ಹತೆಗೆ ವೇತನ ರೂ. 1,10,000/- ಹಾಗೂ 5 ವರ್ಷಗಳ ಅನುಭವವಿರುವ ಎಂ.ಬಿ.ಬಿ.ಎಸ್. ಪದವೀಧರರಿಗೆ ರೂ. 60,000/- ವೇತನವಿರುತ್ತದೆ. ಈ ಹುದ್ದೆಗೆ ಗರಿಷ್ಠ ವಯೋಮಿತಿ 60 ವರ್ಷಗಳು.
ಜಿಲ್ಲಾ ಸಂಯೋಜಕರು – 1 ಹುದ್ದೆ: ಲೈಫ್ ಸೈನ್ಸಸ್, ಪಬ್ಲಿಕ್ ಹೆಲ್ತ್, ಸಮಾಜಶಾಸ್ತ್ರ, ಗ್ರಾಮೀಣಾಭಿವೃದ್ಧಿ, ಅರ್ಥಶಾಸ್ತ್ರ, ಮಾನವ ಸಂಪನ್ಮೂಲ, ಸಮಾಜ ಕಾರ್ಯ(ಎಂಎಸ್ ಡಬ್ಲ್ಯೂ) ಅಥವಾ ಮನೋವಿಜ್ಞಾನ (ಸೈಕಾಲಜಿ) ವಿಷಯಗಳಲ್ಲಿ ಪ್ರಥಮ ದರ್ಜೆಯೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ಮಾಸಿಕ ವೇತನ ರೂ. 30,000/- ಹಾಗೂ ಗರಿಷ್ಠ ವಯೋಮಿತಿ 45 ವರ್ಷಗಳು‌ ಆಗಿರುತ್ತದೆ.
ಅರ್ಜಿ ವಿತರಣೆ: ದಿನಾಂಕ 14/10/2026 ರಿಂದ 27/10/2026 ರವರೆಗೆ ಪ್ರತಿದಿನ ಮಧ್ಯಾಹ್ನ 1:00 ಗಂಟೆಯ ತನಕ ಮಾತ್ರ ಅರ್ಜಿಗಳನ್ನು ವಿತರಿಸಲಾಗುತ್ತದೆ (ಸರ್ಕಾರಿ ರಜಾ ದಿನಗಳು, 4ನೇ ಶನಿವಾರ ಮತ್ತು ಭಾನುವಾರ ಹೊರತುಪಡಿಸಿ).
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 28/10/2026 ರ ಸಂಜೆ 5:00 ಗಂಟೆಯವರೆಗೆ ಅವಕಾಶವಿರುತ್ತದೆ.
ಅಭ್ಯರ್ಥಿಗಳು ಕನ್ನಡದಲ್ಲಿ ಸ್ಪಷ್ಟವಾಗಿ ಓದಲು ಮತ್ತು ಬರೆಯಲು ಬರುವವರಾಗಿರಬೇಕು. ನೇಮಕಾತಿ ಪ್ರಕ್ರಿಯೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08182 – 222382 ಅಥವಾ 9481691580 ಅನ್ನು ಸಂಪರ್ಕಿಸಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...