B. Y. Raghavendra ಶಿಕಾರಿಪುರದಲ್ಲಿ ಆಯೋಜಿಸಲಾದ ಬೃಹತ್ ‘ಸ್ವದೇಶಿ ಮೇಳ’ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಜ್ಯೋತಿ ಬೆಳಗಿಸುವ ಮೂಲಕ ವಿಧ್ಯುಕ್ತವಾಗಿ ಉದ್ಘಾಟಿಸಿದರು. ನಂತರ ಪ್ರದರ್ಶನ ಮಳಿಗೆಗಳನ್ನು ಸಂಸದ ಬಿ.ವೈ.ರಾಘವೇಂದ್ರ ವೀಕ್ಷಿಸಿದರು..
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ‘ಆತ್ಮನಿರ್ಭರ ಭಾರತ’ ಹಾಗೂ ‘ವೋಕಲ್ ಫಾರ್ ಲೋಕಲ್’ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಇಂತಹ ಸ್ವದೇಶಿ ಮೇಳಗಳು ಪ್ರಮುಖ ಪಾತ್ರ ವಹಿಸುತ್ತವೆ. ದೇಶೀಯ ಉದ್ಯಮಿಗಳು, ಸ್ಥಳೀಯ ಕೈಗಾರಿಕೆಗಳು, ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಈ ವೇದಿಕೆ ಅತ್ಯಂತ ಉಪಯುಕ್ತವಾಗಿದೆ ಎಂದು ರಾಘವೇಂದ್ರ ಹೇಳಿದರು.
ಸ್ಥಳೀಯವಾಗಿ ತಯಾರಾಗುವ ವಸ್ತುಗಳನ್ನು ಉತ್ತೇಜಿಸುವ ಮೂಲಕ ನಮ್ಮ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವುದು ಹಾಗೂ ಯುವಜನತೆಗೆ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಪ್ರೇರೇಪಿಸುವುದುಮುಖ್ಯ ಉದ್ದೇಶವಾಗಿದೆ ಎಂದು ರಾಘವೇಂದ್ರ ಅಭಿಪ್ರಾಯಪಟ್ಟರು.
B. Y. Raghavendra ಈ ಸುಸಂದರ್ಭದಲ್ಲಿ ಜನಪ್ರತಿನಿಧಿಗಳು, ಪದಾಧಿಕಾರಿಗಳು, ಸ್ವದೇಶಿ ಜಾಗರಣ ಮಂಚದ ಪ್ರಮುಖರು ಹಾಗೂ ಬಂಧು-ಭಗಿನಿಯರು ಉಪಸ್ಥಿತರಿದ್ದರು.
