ಶಿವಮೊಗ್ಗ ಜಿಲ್ಲೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ನಿಲಯಗಳ ನೋಂದಣಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅನ್ವಯಿಸುವ ವಸತಿ ನಿಲಯಗಳು: ಸರ್ಕಾರಿ, ಸರ್ಕಾರೇತರ, ನಾಗರಿಕ ಸಮಾಜ ಸಂಸ್ಥೆಗಳು, ಟ್ರಸ್ಟ್, ಧಾರ್ಮಿಕ, ಖಾಸಗಿ ಹಾಗೂ ವೈಯಕ್ತಿಕವಾಗಿ ನಡೆಸಲ್ಪಡುವ ಯಾವುದೇ ಔಪಚಾರಿಕ ಮತ್ತು ಅನೌಪಚಾರಿಕ ಶೈಕ್ಷಣಿಕ ವಸತಿ ನಿಲಯಗಳಿಗೆ (ಸ್ಟ್ಯಾಂಡ್-ಅಲೋನ್ ಹಾಸ್ಟೆಲ್ಗಳು, ಶಿಕ್ಷಣ ಸಂಸ್ಥೆಗಳ ವಸತಿ ನಿಲಯಗಳು ಮತ್ತು ವಸತಿ ಶಾಲೆಗಳು) ಈ ನಿಯಮ ಅನ್ವಯಿಸುತ್ತದೆ.
ಅಧಿಕೃತ ವೆಬ್ಸೈಟ್ https://shivamogga.nic.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ಸಂಬಂಧಿತ ಕಚೇರಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಮಾರ್ಗಸೂಚಿಯನ್ವಯ 31/10/2026 ರೊಳಗೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರನ್ನು ಅಥವಾ ದೂರವಾಣಿ ಸಂಖ್ಯೆ 08182-295514 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ವಸತಿ ನಿಲಯಗಳ ನೋಂದಣಿಗೆ ಆನ್ ಲೈನ್ ಅರ್ಜಿ ಆಹ್ವಾನ
Date:
