Friday, October 16, 2026
Friday, October 16, 2026

ಡಾಬಾ ಮತ್ತು ಹೊಟೆಲ್ ಗಳ ಮೇಲೆ ಅಬಕಾರಿ ಸಿಬ್ಬಂದಿ ದಾಳಿ.ಏಳು ಪ್ರಕರಣ ದಾಖಲಾಗಿವೆ : ಡಾ.ಕೆ.ಎಸ್.ಮುರಳಿ

Date:

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಡಾಬಾ ಹಾಗೂ ಮಾಂಸಾಹಾರಿ ಹೋಟೆಲ್‌ಗಳ ಮೇಲೆ ಅಬಕಾರಿ ಇಲಾಖೆಯು ಸಾಮೂಹಿಕ ದಾಳಿ ನಡೆಸಿ, 7 ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
ಶಿವಮೊಗ್ಗ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಡಾ. ಕೆ.ಎಸ್. ಮುರಳಿ ಅವರ ಮಾರ್ಗದರ್ಶನದಲ್ಲಿ, ಅಬಕಾರಿ ಉಪ ಅಧೀಕ್ಷಕರಾದ ನೌಷಾದ್ ಅಹಮ್ಮದ್ ಖಾನ್ ಹೆಚ್ (ಶಿವಮೊಗ್ಗ ಉಪ ವಿಭಾಗ) ಹಾಗೂ ಶೀಲಾ ಧಾರಜ್ಕರ್ (ಸಾಗರ ಉಪ ವಿಭಾಗ) ಅವರ ನೇತೃತ್ವದಲ್ಲಿ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಶಿವಮೊಗ್ಗ ಮತ್ತು ತೀರ್ಥಹಳ್ಳಿ ತಾಲೂಕಿನ ಗಾಜನೂರು, ಸಕ್ರೆಬೈಲು ಹಾಗೂ ಮಂಡಗದ್ದೆ ಗ್ರಾಮಗಳ ವ್ಯಾಪ್ತಿಯಲ್ಲಿರುವ ಡಾಬಾ ಮತ್ತು ಮಾಂಸಾಹಾರಿ ಹೋಟೆಲ್‌ಗಳ ಮೇಲೆ ಸಾಮೂಹಿಕ ದಾಳಿ ನಡೆಸಲಾಗಿದೆ. ಈ ವೇಳೆ ಗ್ರಾಹಕರಿಗೆ ಅಕ್ರಮವಾಗಿ ಮದ್ಯಪಾನ ಮಾಡಲು ಅವಕಾಶ ನೀಡಿದ್ದ ಹೋಟೆಲ್ ಹಾಗೂ ಡಾಬಾ ಮಾಲೀಕರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ-15(ಎ) ಮತ್ತು 32(3) ರ ಅಡಿಯಲ್ಲಿ ಒಟ್ಟು 07 ಮೊಕದ್ದಮೆಗಳನ್ನು ದಾಖಲಿಸಲಾಗಿದೆ.
ಇನ್ನು ಮುಂದೆ ಯಾವುದೇ ಡಾಬಾ ಅಥವಾ ಮಾಂಸಾಹಾರಿ ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಅಕ್ರಮವಾಗಿ ಮದ್ಯ ಸೇವಿಸಲು ಅವಕಾಶ ನೀಡಬಾರದೆಂದು ಅಬಕಾರಿ ಇಲಾಖೆಯು ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ ಎಂದು ಅಬಕಾರಿ ಉಪ ಆಯುಕ್ತ ಡಾ.ಕೆ.ಎಸ್.ಮುರಳಿ ತಿಳಿಸಿದ್ದಾರೆ.

—

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...