Saturday, October 17, 2026
Saturday, October 17, 2026

ಸೊರಬದ ಜಾನಪದ ಕಲಾವಿದ ಶಿವರುದ್ರಪ್ಪ ಜೋಗಿ‌ ಅವರಿಗೆ ದಸರೆಯಲ್ಲಿ ಸನ್ಮಾನ

Date:

ಜಗತ್ ಪ್ರಸಿದ್ಧ ಮೈಸೂರಿನಲ್ಲಿ ನಡೆಯುತ್ತಿರುವ ದಸರಾ ಉತ್ಸವ ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧೀಕಾರದಿಂದ ತಾಲೂಕಿನ ಗೆಂಡ್ಲಾ ಹೊಸೂರು ಗ್ರಾಮದ ಜಾನಪದ ಕಲಾವಿದ ಶಿವರುದ್ರಪ್ಪ ಜೋಗಿ ಅವರನ್ನು ಸನ್ಮಾನಿಸಲಾಗುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಜಾಗೃತ ಸಮಿತಿ ಸದಸ್ಯ ಡಿ.ಎಸ್. ಶಂಕರ್ ಶೇಟ್ ತಿಳಿಸಿದ್ದಾರೆ.

ಮೈಸೂರಿನ ದಸರಾ ಉತ್ಸವದ ಅಂಗವಾಗಿ ಅ.17 ರಂದು ಬೆಳಗ್ಗೆ 11 ಕ್ಕೆ ಹಳೇ ಡಿಸಿ ಕಚೇರಿ ಮುಂಭಾಗದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದ ಪುಸ್ತಕ ಮೇಳದಲ್ಲಿ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಸಾಂಸ್ಕೃತಿಕ ವೇದಿಕೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಗೌರವಿಸಿ ಸನ್ಮಾನಿಸಲಾಗುತ್ತಿದೆ. ಅವರು ಮನೆಗೊಂದು ಗ್ರಂಥಾಲಯ ಕಾರ್ಯಕ್ರಮದಲ್ಲಿ ಸ್ವರಚಿತ ಗೀತೆಯನ್ನು ಹಾಡುವ ಮೂಲಕ ಜಾಗೃತಿ ಮೂಡಿಸಿ, ಪ್ರಚಾರವನ್ನು ನಡೆಸಿದ್ದರು. ಇದಕ್ಕೆ ರಾಜ್ಯಾದ್ಯಂತ ಮೆಚ್ಚುಗೆಗೆ ಪಾತ್ರವಾಗಿತ್ತು. ಇದನ್ನು ಪರಿಗಣಿಸಿ ಪ್ರಾಧಿಕಾರವು ಗೌರವಿಸಿ ಸನ್ಮಾನಿಸುತ್ತಿರುವುದು ತಾಲೂಕು ಹಾಗೂ ಪುಸ್ತಕ ಪ್ರೇಮಿಗಳು ಹೆಮ್ಮೆ ಪಡುವ ವಿಷಯವಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...