Saturday, October 17, 2026
Saturday, October 17, 2026

ತ್ಯಾಜವಳ್ಳಿಯಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸೂಕ್ತ ಜಮೀನು ಮಂಜೂರಾತಿ ಪ್ರಕ್ರಿಯೆ ಪ್ರಗತಿ ಪರಿಶೀಲನೆ- ಮಹಬೂಬ್ ಪಾಷ

Date:

ಶಿವಮೊಗ್ಗ ಜಿಲ್ಲೆಯ ಹರನಹಳ್ಳಿ ಹೋಬಳಿಯ ತ್ಯಾಜುವಳ್ಳಿ ಗ್ರಾಮದ ಸರ್ವೆ ನಂಬರ್ 60 ಮತ್ತು 27 ರ ಜಮೀನಿನಲ್ಲಿ ಶ್ರೀ ಕಂಠೀರವ ಸ್ಟುಡಿಯೋ ಹಾಗೂ ಕಿರು ಫಿಲ್ಮ್ ಸಿಟಿ ನಿರ್ಮಾಣಕ್ಕಾಗಿ ಕನಿಷ್ಠ 25 ಎಕರೆ ಹಾಗೂ ಗರಿಷ್ಠ ಲಭ್ಯವಿರುವ ಸರ್ಕಾರಿ ಜಮೀನು ಮಂಜೂರು ಮಾಡುವ ಪ್ರಕ್ರಿಯೆಯ ಪ್ರಗತಿ ಪರಿಶೀಲನೆ ಸಂಬಂಧಿಸಿದಂತೆ, ಶ್ರೀ ಕಂಠೀರವ ಸ್ಟುಡಿಯೋದ ಮಾನ್ಯ ಅಧ್ಯಕ್ಷರಾದ ಶ್ರೀ ಮಹಬೂಬ್ ಪಾಷ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉನ್ನತ ಮಟ್ಟದ ಅಧಿಕೃತ ಸಮಾಲೋಚನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭುಲಿಂಗ ಕವಲಿಕಟ್ಟಿ, ಭಾ.ಆ.ಸೇ., ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಅಭಿಷೇಕ್ ವಿ., ಕೆ.ಎ.ಎಸ್., ತಹಶೀಲ್ದಾರ್ ಶ್ರೀ ರಾಜೀವ್ ಕುಮಾರ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ (AD) ಶ್ರೀ ಮಾರುತಿ ಅವರೊಂದಿಗೆ ವಿಸ್ತೃತವಾಗಿ ಚರ್ಚಿಸಲಾಯಿತು.

ಸ್ಟುಡಿಯೋ ಯೋಜನೆಗೆ ಗರಿಷ್ಠ ಪ್ರಮಾಣದ ಜಮೀನು ಒದಗಿಸಲು ಬದ್ಧತೆ ವ್ಯಕ್ತಪಡಿಸಿದ ಜಿಲ್ಲಾಡಳಿತವು, ಮುಂದಿನ ಒಂದು ವಾರದೊಳಗೆ ಸಮಗ್ರ ಪರಿಶೀಲನಾ ವರದಿ ಹಾಗೂ ಅಧಿಕೃತ ಪ್ರಸ್ತಾವನೆಯನ್ನು ಸರ್ಕಾರದ ಅನುಮೋದನೆಗೆ ಸಲ್ಲಿಸುವುದಾಗಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...