Saturday, October 17, 2026
Saturday, October 17, 2026

ಮಕ್ಕಳ ಸುಪ್ತಪ್ರತಿಭೆಗೆ ಸಂಗೀತ ಸ್ಪರ್ಧೆಗಲಕು ಸೂಕ್ತ ವೇದಿಕೆ- ಚೂಡಾಮಣಿ.ಇ. ಪವಾರ್

Date:

ಗೀತ ಗಾಯನ ಸ್ಪರ್ಧೆಗಳು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದರ ಜೊತೆಗೆ ಅವರ ಶೈಕ್ಷಣಿಕ ಬೆಳವಣಿಗೆಗೂ ಸಹಕಾರಿಯಾಗುತ್ತವೆ ಎಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಖಜಾಂಚಿ ಚೂಡಾಮಣಿ ಈ. ಪವಾರ್ ಹೇಳಿದರು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ದೇಶಭಕ್ತಿ ಗೀತೆ ಹಾಗೂ ಜನಪದ ಗೀತೆಗಳ ಗಾಯನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಇಂದಿನ ಒತ್ತಡದ ವಾತಾವರಣದಿಂದ ಹೊರಬಂದು ತಮ್ಮ ಪ್ರತಿಭೆಯನ್ನು ವ್ಯಕ್ತಪಡಿಸಲು ಸಂಗೀತ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ. ಸಂಗೀತದಿಂದ ಏಕಾಗ್ರತೆ ಹೆಚ್ಚುವುದರ ಜೊತೆಗೆ ಧ್ವನಿಯ ಸ್ಪಷ್ಟತೆ, ಉಚ್ಚಾರಣೆ ಹಾಗೂ ಗಾಯನ ಕೌಶಲವೂ ವೃದ್ಧಿಯಾಗುತ್ತದೆ. ಇಂತಹ ಸ್ಪರ್ಧೆಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವುದರೊಂದಿಗೆ ಮುಂದಿನ ದಿನಗಳಲ್ಲಿ ಉನ್ನತ ಮಟ್ಟದ ವೇದಿಕೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸುತ್ತವೆ ಎಂದರು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಪ್ರತಿ ವರ್ಷ ಜಿಲ್ಲಾಮಟ್ಟದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಸ್ಪರ್ಧೆಯಲ್ಲಿ ವಿಜೇತರಾದ ತಂಡಗಳನ್ನು ವಿಭಾಗ ಮಟ್ಟದಲ್ಲಿ ನಡೆಯುವ ಮುಂದಿನ ಸ್ಪರ್ಧೆಗಳಿಗೆ ಕಳುಹಿಸಲಾಗುತ್ತದೆ. ಇದರಿಂದ ಮಕ್ಕಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವುದರ ಜೊತೆಗೆ ತಮ್ಮ ಪ್ರತಿಭೆಯನ್ನು ಮತ್ತಷ್ಟು ಬೆಳೆಸಿಕೊಳ್ಳಲು ಅವಕಾಶ ಸಿಗುತ್ತದೆ ಎಂದು ತಿಳಿಸಿದರು.

ಆಕಾಶವಾಣಿ ಕಲಾವಿದೆ ಜಯಶ್ರೀ ಶ್ರೀಧರ್ ಮಾತನಾಡಿ, ಸಂಗೀತವು ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ದೇಶಭಕ್ತಿ ಗೀತೆಗಳು ಮಕ್ಕಳಲ್ಲಿ ದೇಶಪ್ರೇಮ, ಶಿಸ್ತು ಮತ್ತು ರಾಷ್ಟ್ರದ ಬಗ್ಗೆ ಗೌರವವನ್ನು ಬೆಳೆಸಿದರೆ, ಜನಪದ ಗೀತೆಗಳು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜೀವನ ಮೌಲ್ಯಗಳನ್ನು ಪರಿಚಯಿಸುತ್ತವೆ. ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ವೇದಿಕೆಯ ಭಯ ನಿವಾರಣೆಯಾಗಿ ಆತ್ಮವಿಶ್ವಾಸ ಹೆಚ್ಚುತ್ತದೆ. ಸೋಲು-ಗೆಲುವಿಗಿಂತ ಸ್ಪರ್ಧೆಯಲ್ಲಿ ಭಾಗವಹಿಸುವ ಮನೋಭಾವ ಮತ್ತು ನಿರಂತರ ಅಭ್ಯಾಸ ಮುಖ್ಯ. ಮಕ್ಕಳು ತಮ್ಮ ಪ್ರತಿಭೆಯನ್ನು ಗುರುತಿಸಿಕೊಂಡು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಗೈಡ್ ಆಯುಕ್ತೆ ಲಕ್ಷ್ಮೀ ಕೆ. ರವಿ, ಸ್ಥಾನಕ ಆಯುಕ್ತರಾದ ಜಿ. ವಿಜಯಕುಮಾರ್, ಕಾರ್ಯದರ್ಶಿ ಕೆ.ವಿ. ಚಂದ್ರಶೇಖರಯ್ಯ, ತರಬೇತಿ ಆಯುಕ್ತ ಹೆಚ್. ಶಿವಶಂಕರಪ್ಪ, ಸಹಾಯಕ ವೈ.ಆರ್. ವೀರೇಶಪ್ಪ, ಮಲ್ಲಿಕಾರ್ಜುನ ಕಾನೂರು, ಕಾತ್ಯಾಯಿನಿ ಸೇರಿದಂತೆ ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧ ತಾಲೂಕುಗಳಿಂದ 250ಕ್ಕೂ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆಕಾಶವಾಣಿ ಕಲಾವಿದರಾದ ಜಯಶ್ರೀ ಶ್ರೀಧರ್, ಶುಭ ರಾಘವೇಂದ್ರ ಹಾಗೂ ಮನಸ್ವಿನಿ ಎನ್.ಆರ್. ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...