Monday, October 19, 2026
Monday, October 19, 2026

ಪತ್ರಕರ್ತ ವೆಂಕಟೇಶ ಎಸ್ ಸಂಪ ಅವರಿಗೆ “”ನೋಬ್ಲರ್ ಅವಾರ್ಡ್- 2026 ” ಘೋಷಣೆ

Date:

ಪತ್ರಕರ್ತ ಹಾಗೂ ಸಂಪದ ಸಾಲು ಪತ್ರಿಕೆಯ ಸಂಪಾದಕ ವೆಂಕಟೇಶ ಎಸ್ ಸಂಪ ಅವರಿಗೆ ಮತ್ತೊಂದು ಪ್ರತಿಷ್ಠಿತ ಗೌರವ ಲಭಿಸಿದೆ. ಜಿಎಸ್ ಹೈ-ಟೆಕ್ ಸೊಲ್ಯೂಷನ್ಸ್ ಸಂಸ್ಥೆ ಮತ್ತು ಕನ್ನಡ ಸ್ನೇಹ ಬಳಗ ನೀಡುವ ಇಂಟರ್‌ನ್ಯಾಷನಲ್ ನೋಬ್ಲರ್ ಅವಾರ್ಡ್-೨೦೨೬ ಅನ್ನು ೨೦೨೬ರ ಅ. ೨೫ ರಂದು ಗೋವಾದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಘಟಕ ಮತ್ತು ಉದ್ಯಮಿ ಡಾ.ಜಿ. ಶಿವಣ್ಣ ತಿಳಿಸಿದ್ದಾರೆ.
ಸಂಪ ಅವರಿಗೆ ಈಗಾಗಲೇ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಶಸ್ತಿ, ಕೇಂದ್ರ ಸರ್ಕಾರದ ಸಹಯೋಗದ ಡಾ. ಎ.ಪಿ. ಜೆ ಅಬ್ದುಲ್ ಕಲಾಂ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿ ಗೌರವಗಳಿಗೆ ಭಾಜನರಾಗಿದ್ದಾರೆ.
ವೆಂಕಟೇಶ ಎಸ್ ಸಂಪ ಅವರು ಕಳೆದ ೨೦ ವರ್ಷಗಳಿಂದ ಸಂಪದ ಸಾಲು ಪತ್ರಿಕೆಯನ್ನು ನಿರಂತರವಾಗಿ ಮುನ್ನಡೆಸುತ್ತಿದ್ದಾರೆ. ಸಮಾಜಮುಖಿ ಚಿಂತನೆ, ಯುವಜನರಿಗೆ ಪ್ರೇರಣೆ, ಮಾನವೀಯ ಮೌಲ್ಯಗಳ ಪ್ರತಿಪಾದನೆ ಹಾಗೂ ಸಕಾರಾತ್ಮಕ ಬದಲಾವಣೆಯ ಆಶಯಗಳನ್ನು ತಮ್ಮ ಬರಹಗಳ ಮೂಲಕ ಓದುಗರಿಗೆ ತಲುಪಿಸುತ್ತಿದ್ದಾರೆ.
ರೇಡಿಯೋ ಮತ್ತು ಟಿವಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿರುವ ಅವರು, ವಿವಿಧ ಟಿವಿ ಚಾನೆಲ್‌ಗಳ ಚರ್ಚಾ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ಸಿನಿಮಾ ಹಾಗೂ ಧಾರಾವಾಹಿಗಳಲ್ಲಿಯೂ ನಟಿಸುವ ಮೂಲಕ ಬಹುಮುಖ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ.
ಎಂಬಿಎ ಪದವೀಧರರಾಗಿರುವ ಅವರು ಕೃಷಿಯಲ್ಲಿಯೂ ಆಸಕ್ತಿ ಬೆಳೆಸಿಕೊಂಡಿದ್ದು, ವಿವಿಧ ಮಿಶ್ರ ಬೆಳೆಗಳ ಕೃಷಿ ಹಾಗೂ ಸಾವಯವ ಕೃಷಿಯ ಮೂಲಕ ಸ್ವಾವಲಂಬಿ ಬದುಕಿನ ಮಹತ್ವವನ್ನು ಸಾರುತ್ತಿದ್ದಾರೆ.
ರಕ್ತದಾನ, ನೇತ್ರದಾನ, ಪರಿಸರ ಜಾಗೃತಿ ಮತ್ತು ನೀರಿನ ಸಂರಕ್ಷಣೆ ಸೇರಿದಂತೆ ಹಲವು ಸಾಮಾಜಿಕ ಅಭಿಯಾನಗಳಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸಂಪದ ಫೌಂಡೇಶನ್ ಫಾರ್ ಪಬ್ಲಿಕ್ ಅವೇರ್ನೆಸ್ ಸಂಸ್ಥೆಯ ಮೂಲಕ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...