Monday, October 19, 2026
Monday, October 19, 2026

ರಾತ್ರಿ ಸಂಚರಿಸುವ ದುರ್ಗಾಂಬ ಬಸ್ ಪ್ರಯಾಣಿಕರನ್ನ ಹತ್ತಿಸುವುದಿಲ್ಲ ಎಂಬ ನಡವಳಿಕೆಗೆ ತೀವ್ರ ಪ್ರತಿಭಟನೆ

Date:

ಶಿವಮೊಗ್ಗದಿಂದ ತೀರ್ಥಹಳ್ಳಿಗೆ ತೆರಳುವ ಪ್ರಯಾಣಿಕರನ್ನು ದುರ್ಗಾಂಬಾ ಬಸ್‌ನಲ್ಲಿ ಹತ್ತಿಸಿಕೊಳ್ಳುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ, ತೀರ್ಥಹಳ್ಳಿಯಲ್ಲಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬಸ್ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು.

ಶಿವಮೊಗ್ಗದಿಂದ ರಾತ್ರಿ 10.30ಕ್ಕೆ ಹೊರಡುವ ದುರ್ಗಾಂಬಾ ಬಸ್‌ನಲ್ಲಿ ತೀರ್ಥಹಳ್ಳಿಯ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಸಂಘಟನೆಯ ಕಾರ್ಯಕರ್ತರು, ಶಿವಮೊಗ್ಗಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳದಿದ್ದರೆ, ತೀರ್ಥಹಳ್ಳಿಯಿಂದಲೂ ಪ್ರಯಾಣಿಕರನ್ನು ಹತ್ತಿಸಿಕೊಳ್ಳಬಾರದು ಎಂದು ಕಾರ್ಯಕರ್ತರು ತಾಕೀತು ಮಾಡಿದರು.

ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹರಿಸಿ, ಬಸ್ ಸಂಚಾರದ ಸಮಸ್ಯೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...