K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವುದಾಗಿ ಆರೋಪಿಸಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ರಾಷ್ಟ್ರಭಕ್ತರ ಬಳಗದ ಮುಖಂಡರೊಂದಿಗೆ ತೆರಳಿದ ಅವರು, ರಿಜ್ವಾನ್ ಬೇಗ್ ಹಾಗೂ ಡಿಜಿಟಲ್ ಫರಾನ್ ರಶೀದ್ ಎಂಬುವರಿಂದ ಬೆದರಿಕೆ ಕರೆ ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬೆದರಿಕೆ ಕರೆಗಳ ಕುರಿತು ಸೂಕ್ತ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ರಕ್ಷಣೆ ನೀಡಬೇಕು ಎಂದು ಈಶ್ವರಪ್ಪ ಆಗ್ರಹಿಸಿದ್ದಾರೆ.
