ದಸರಾ ಹಬ್ಬದ ಹಿನ್ನೆಲೆಯಲ್ಲಿ ಹೊಸ ಕಾರು ಖರೀದಿಸಿ ಡೆಲಿವರಿ ಪಡೆಯುವ ವೇಳೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ನಡೆದಿದೆ.
ಸಾಗರದ ಮಾರುತಿ ಕಾರು ಶೋರೂಂನಲ್ಲಿ ಹೊಸ ಕಾರಿನ ಡೆಲಿವರಿ ಪಡೆಯುತ್ತಿದ್ದ ವೇಳೆ, ವೇಗವಾಗಿ ಚಲಿಸಿದ ಕಾರು ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ದೃಶ್ಯ ಶೋರೂಂನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
