“ಶಿವಮೊಗ್ಗ ನಗರದ ಸಮಸ್ತ ನಾಗರಿಕ ಬಂಧುಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಹಾಗೂ ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಸಾಂಪ್ರದಾಯಿಕ ದೇವಾನುದೇವತೆಗಳ ಉತ್ಸವದಲ್ಲಿ ಎಂದಿನಂತೆ ಶ್ರದ್ಧಾ-ಭಕ್ತಿಯಿಂದ ಪಾಲ್ಗೊಳ್ಳಬೇಕು,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಸಾರ್ವಜನಿಕರಲ್ಲಿ ಕಳಕಳಿಯ ವಿನಂತಿ ಮಾಡಿದ್ದಾರೆ.
“ಈ ಬಾರಿ ಅಂಬಾರಿ ಉತ್ಸವವು ಇರುವುದಿಲ್ಲ. ಆದರೆ ನಮ್ಮ ಪರಂಪರೆಯ ದೇವಾನುದೇವತೆಗಳ ಧಾರ್ಮಿಕ ಉತ್ಸವಗಳು ಹಾಗೂ ನಗರದ ಐತಿಹಾಸಿಕ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ನಡೆಯಲಿರುವ ಪವಿತ್ರ ಬನ್ನಿ ಮುಡಿಯುವ ಧಾರ್ಮಿಕ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಲಿವೆ. ಸಾರ್ವಜನಿಕರು ಯಾವುದೇ ಗೊಂದಲಗಳಿಗೆ ಒಳಗಾಗದೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಬನ್ನಿ ಮುಡಿಯುವ ಪವಿತ್ರ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿಕೊಳ್ಳುತ್ತೇನೆ,” ಎಂದು ತಿಳಿಸಿದ್ದಾರೆ.
