Thursday, October 22, 2026
Thursday, October 22, 2026

ಜವಳಿ ವಲಯದ ರಫ್ತು ಉದ್ದಿಮೆದಾರರಿಗೆ ಒಂದು ದಿನದ ಕಾರ್ಯಾಗಾರ

Date:

ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ಅ.27 ರಂದು ಬೆಳಗ್ಗೆ 10.30ಕ್ಕೆ ನಗರದ ಶಿವಪ್ಪನಾಯಕ ಕಾಂಪ್ಲೆಕ್ಸ್, 3ನೇ ಮಹಡಿ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜವಳಿ ವಲಯದ ರಫ್ತು ಉದ್ದಿಮೆದಾರರಿಗೆ ಒಂದು ದಿನದ ರಫ್ತು ಪ್ರೋತ್ಸಾಹದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ವಹಿಸಲಿದ್ದು, ಕೈಮಗ್ಗ ಮತ್ತು ಜವಳಿ ಇಲಾಖೆಯ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕ ಎ.ಬಿ.ಬಸವರಾಜು ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ್ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೈಮತ್ತು ಮತ್ತು ಜವಳಿ ಇಲಾಖೆಯ ಅಪರ ನಿರ್ದೆಶಕ ಸಿ.ಎಸ್. ಯೋಗೇಶ್, ಜಂಟಿ ನಿರ್ದೇಶಕರುಗಳಾದ ಸುಮಲತ ಡಿ., ಮತ್ತು ಆರ್. ಗಣೇಶ್ ಪಾಲ್ಗೊಳ್ಳಲಿದ್ದಾರೆ.
ಕಾರ್ಯಾಗಾರದಲ್ಲಿ ಅರವಿಂದ್ ಭಟ್, ಲೋಕೇಶ್ವರಿ ಗೌಡ, ಸಂಕೇತ್ ಕೂಗೆ, ವಿಕಾಸಕುಮಾರ ಪ್ರಸಾದ, ದೊರೆಬಾಬು, ಸುಂದರೇಶ್ ಬಿ.ಜೆ. ಹಾಗೂ ಸುರೇಶ್ ಎ. ಉಪನ್ಯಾಸ ನೀಡುವರು ಎಂದು ಶಿವಮೊಗ್ಗ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಹೆಚ್. ಅಮ್ರದ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಭಕ್ತಿ,ಜ್ಞಾನ ಮತ್ತು ಧರ್ಮನಿಷ್ಠೆಗಳಿಗೆ ಶ್ರೀಮಧ್ವಾಚಾರ್ಯರು ಒತ್ತು ನೀಡಿದ್ದರು- ಬಿ.ವೈ.ರಾಘವೇಂದ್ರ

ಜಗದ್ಗುರು ಶ್ರೀ ಮಧ್ವಾಚಾರ್ಯರು ಭಕ್ತಿ, ಜ್ಞಾನ ಮತ್ತು ಧರ್ಮನಿಷ್ಠೆಗೆ ವಿಶೇಷ ಮಹತ್ವ...

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...