ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಭವ್ಯ ಜಂಬೂಸವಾರಿಯಲ್ಲಿ ಶಿವಮೊಗ್ಗದ ಮಹಿಳಾ ಡೊಳ್ಳು ಕಲಾವಿದರು ಅದ್ಭುತ ಪ್ರದರ್ಶನ ನೀಡಿ, ನಾಡಿನ ಗಮನ ಸೆಳೆದಿದ್ದಾರೆ.
ಮೈಸೂರು ಅರಮನೆಯ ಆವರಣದಲ್ಲಿ ನಡೆದ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಅರಮನೆ ವಂಶಸ್ಥರು, ಸಚಿವರು ಹಾಗೂ ಹಿರಿಯ ಗಣ್ಯರ ಸಮ್ಮುಖದಲ್ಲಿ ಮಹಿಳಾ ಡೊಳ್ಳು ಕುಣಿತದ ಕಲಾ ಪ್ರಕಾರವನ್ನು ಅತ್ಯಂತ ಆಕರ್ಷಕವಾಗಿ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಈ ಸಾಂಸ್ಕೃತಿಕ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ತಂಡದ ಮುಖ್ಯಸ್ಥರಾದ ಶ್ರೀಮತಿ ಪಣಿಯಮ್ಮ, ಶ್ರೀಮತಿ ಶಾಂತಾ ಹಾಗೂ ಶ್ರೀಮತಿ ದಾಕ್ಷಾಯಿಣಿ ಹಾಗೂ ಡೊಳ್ಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಮಹಿಳಾ ಕಲಾವಿದರಿಗೆ ಜಿಲ್ಲಾಡಳಿತ ಹಾಗೂ ಇಲಾಖೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.
ಜೊತೆಗೆ, ಈ ಕಲಾತಂಡಕ್ಕೆ ಸೂಕ್ತ ಮಾರ್ಗದರ್ಶನ ನೀಡಿದ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಹಾಗೂ ಸಹಕರಿಸಿದ ಜಿಲ್ಲಾಡಳಿತಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ಅವರು ವಿಶೇಷ ಧನ್ಯವಾದಗಳನ್ನು ತಿಳಿಸಿದ್ದಾರೆ.
ನಾಡಹಬ್ಬದಲ್ಲಿ ನಾಡಿನ ಗಮನ ಸೆಳೆದ ಶಿವಮೊಗ್ಗ ಮಹಿಳೆಯರ ಡೊಳ್ಳು ಮೇಳ
Date:
