ಮೈಸೂರು ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯವು 28 ತಾಂತ್ರಿಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, 28 ಹುದ್ದೆಗಳ ಪೈಕಿ ಫಿಟ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಮೆಕಾನಿಕ್ ವಿದ್ಯಾರ್ಹತೆಯ ಆಧಾರದ ಮೇಲೆ 02 ಹುದ್ದೆಗಳನ್ನು ಮಾಜಿ ಸೈನಿಕರಿಗೆ ಮೀಸಲಿರಿಸಿರುತ್ತಾರೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿಚ್ಚಿಸುವ ಮಾಜಿ ಸೈನಿಕರು ದಿನಾಂಕ 18/11/2026 ರೊಳಗಾಗಿ https://cftri.res.in ಅಥವಾ https://recruitment.cftri.res.in ಎಂಬ ಜಾಲತಾಣದಲ್ಲಿ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಲಾಗಿರುವ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ.ಹಿರೇಮಠ ತಿಳಿಸಿದ್ದಾರೆ.
ತಾಂತ್ರಿಕ ಹುದ್ದೆಗೆ ಅರ್ಜಿ ಆಹ್ವಾನ
Date:
