Monday, October 26, 2026
Monday, October 26, 2026

Breaking News ಪತಿ ಮತ್ತು ಪತಿಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆ.

Date:

Breaking News ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊದಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಪತಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮೃತ ಗೃಹಿಣಿಯನ್ನು ಅಕ್ಷತಾ ಎಂದು ಗುರುತಿಸಲಾಗಿದೆ. ಎಂಟು ವರ್ಷಗಳ ಹಿಂದೆ ಹೊದಲ ಗ್ರಾಮದ ಪುರುಷೋತ್ತಮ ಅವರೊಂದಿಗೆ ಅಕ್ಷತಾ ಅವರ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಕಳೆದ ಅಕ್ಟೋಬರ್ 13ರಂದು ಕೌಟುಂಬಿಕ ವಿಚಾರವಾಗಿ ಗಲಾಟೆ ನಡೆದಿದ್ದು, ಈ ವೇಳೆ ಅತ್ತೆ ಲೀಲಾವತಿ ಅವರು ಪೊರಕೆಯ ಹಿಡಿಯಿಂದ ಹೊಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದರಿಂದ ಮನನೊಂದ ಅಕ್ಷತಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

Breaking News ಆಸ್ಪತ್ರೆಯಲ್ಲಿ ತಾಯಿ ಮೀನಾಕ್ಷಿ ವಿಚಾರಿಸಿದಾಗ, ಅಕ್ಷತಾ ತಮಗಾದ ಹಿಂಸೆಯ ಬಗ್ಗೆ ವಿವರಿಸಿದ್ದರು ಎನ್ನಲಾಗಿದೆ. ಅಲ್ಲದೆ, ಪೊಲೀಸರಿಗೆ ಸುಳ್ಳು ಹೇಳಿಕೆ ನೀಡುವಂತೆ ಒತ್ತಡ ಹೇರಲಾಗಿತ್ತು ಎಂಬ ಆರೋಪವೂ ಕೇಳಿಬಂದಿದೆ.

ಮಗಳ ಸಾವಿಗೆ ಗಂಡನ ಮನೆಯವರೇ ಕಾರಣ ಎಂದು ಆರೋಪಿಸಿ ತಾಯಿ ನೀಡಿದ ದೂರಿನ ಮೇರೆಗೆ, ಪತಿ ಸೇರಿದಂತೆ ನಾಲ್ವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hartalu Halappa ರಾಜ್ಯದಲ್ಲಿ ವಿದ್ಯುತ್ ಕೊರತೆ: ಸರ್ಕಾರದ ಅಸಮರ್ಥತೆ- ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಪ್ರಶ್ನೆ.

Hartalu Halappa ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ...

Shimoga Pes College ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧ ಮಂಡನೆ: ಎಂಬಿಎ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ.

Shimoga Pes College ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ ಪಿಇಎಸ್‌ಐಟಿ‌ಎಂ...

Rain In Shivamogga ಮಲೆನಾಡಿನ ಕಡೆ ಮಳೆ : ಹವಾಮಾನ ಸಾರಾಂಶ

Rain In Shivamogga ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು...