ಕೇಂದ್ರ, ರಾಜ್ಯ ಸರ್ಕಾರಿ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು, ಸೈನಿಕರು ಹಾಗೂ ನೌಕರರ ಭವಿಷ್ಯನಿಧಿ (ಇಪಿಎಫ್ ಒ) ಪಿಂಚಣಿದಾರರಿಗೆ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ತಮ್ಮ ಮನೆಬಾಗಿಲಿನಲ್ಲೇ ಸಲ್ಲಿಸಲು ಭಾರತೀಯ ಅಂಚೆ ಇಲಾಖೆಯು ವಿಶೇಷ ವ್ಯವಸ್ಥೆ ಕಲ್ಪಿಸಿದೆ.
ಪಿಂಚಣಿದಾರರು ತಮ್ಮ ಜೀವನ ಪ್ರಮಾಣ ಪತ್ರ ಸಲ್ಲಿಸಲು ಎದುರಿಸುತ್ತಿರುವ ತೊಂದರೆಗಳನ್ನು ನಿವಾರಿಸಲು ‘ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್’ ಮೂಲಕ ಈ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಪೋಸ್ಟ್ಮ್ಯಾನ್ ಅಥವಾ ಬಯೋಮೆಟ್ರಿಕ್ ದೃಢೀಕರಣ ಹಾಗೂ ಫೇಸ್ ಆರ್ಡಿ ಆ್ಯಪ್ ತಂತ್ರಜ್ಞಾನ ಬಳಸಿ ಜೀವನ್ ಪ್ರಮಾಣ ಪೋರ್ಟಲ್ ಮೂಲಕ ಕೆಲವೇ ನಿಮಿಷಗಳಲ್ಲಿ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಸಲ್ಲಿಸಬಹುದಾಗಿದೆ.
ಈ ಸೇವೆ ಪಡೆಯಲು ಪಿಂಚಣಿದಾರರು ತಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಒದಗಿಸಿ, ಬಯೋಮೆಟ್ರಿಕ್ ವೆರಿಫೈ ಮಾಡಬೇಕಾಗುತ್ತದೆ. ಜಿಎಸ್ಟಿ ಸೇರಿದಂತೆ ಕೇವಲ ರೂ. 70/- ಶುಲ್ಕ ಪಾವತಿಸಿ, ಹತ್ತಿರದ ಅಂಚೆ ಕಚೇರಿ ಅಥವಾ ಮನೆಗೆ ಬರುವ ಪೋಸ್ಟ್ಮ್ಯಾನ್ ಮೂಲಕ ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳುವಂತೆ ಕರ್ನಾಟಕ ಅಂಚೆ ವೃತ್ತದ ಮುಖ್ಯ ಅಂಚೆ ಮಹಾನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಪಿಂಚಣಿದಾರರ ಮನೆಬಾಗಿಲಿಗೆ ಡಿಜಿಟಲ್ ಜೀವನ ಪ್ರಮಾಣ ಪತ್ರ ಸೌಲಭ್ಯ: ಅಂಚೆ ಇಲಾಖೆಯಿಂದ ಹೊಸ ಉಪಕ್ರಮ
Date:
