ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗಿಳಾಲಗುಂಡಿ ತಿರುವಿನಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಬಿಳಿ ಕಾರು ಹಾಗೂ ಶಿವಮೊಗ್ಗದಿಂದ ಆನಂದಪುರದ ಕಡೆಗೆ ಬರುತ್ತಿದ್ದ ಕೆಂಪು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
