Wednesday, October 28, 2026
Wednesday, October 28, 2026

ಶಿವಪ್ಪನಾಯಕ ವೃತ್ತದಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವು: ಹೂವಿನ ವ್ಯಾಪಾರಿಗಳಿಗೆ ಪೊಲೀಸರ ಕೊನೆಯ ಎಚ್ಚರಿಕೆ

Date:

ಶಿವಮೊಗ್ಗ ನಗರದ ಬಿಹೆಚ್ ರಸ್ತೆಯ ಶಿವಪ್ಪನಾಯಕ ವೃತ್ತದಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವುಗೊಳಿಸುವ ಕಾರ್ಯಾಚರಣೆಯನ್ನು ಟ್ರಾಫಿಕ್ ಪೊಲೀಸರು ನಡೆಸಿದರು.

ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಫುಟ್‌ಪಾತ್ ಆಕ್ರಮಿಸಿಕೊಂಡಿದ್ದ ಹೂವಿನ ಮಳಿಗೆಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಯಿತು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಫುಟ್‌ಪಾತ್ ಖಾಲಿ ಮಾಡುವಂತೆ ಪೊಲೀಸರು ಹಲವು ಬಾರಿ ಸೂಚನೆ ನೀಡಿದ್ದರೂ, ವ್ಯಾಪಾರಿಗಳು ಅದನ್ನು ಪಾಲಿಸಿರಲಿಲ್ಲ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಮೈಕ್ ಮೂಲಕ ಅನೌನ್ಸ್ ಮಾಡಿ, ಹೂವಿನ ವ್ಯಾಪಾರಿಗಳಿಗೆ ಕೊನೆಯ ಎಚ್ಚರಿಕೆ ನೀಡಿದ ಬಳಿಕ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು.

ಫುಟ್‌ಪಾತ್ ಅತಿಕ್ರಮಣ ತೆರವುಗೊಂಡಿರುವುದರಿಂದ ಶಿವಪ್ಪನಾಯಕ ವೃತ್ತದಲ್ಲಿ ಪಾದಚಾರಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಫುಟ್‌ಪಾತ್‌ಗಳನ್ನು ಅತಿಕ್ರಮಿಸದಂತೆ ಪೊಲೀಸರು ವ್ಯಾಪಾರಿಗಳಿಗೆ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Radio Shivamogga ಕನ್ನಡ ರಾಜ್ಯೋತ್ಸವಕ್ಕೆ ರೇಡಿಯೋ ಶಿವಮೊಗ್ಗ 90.8 ಎಫ್.ಎಂ.ನಿಂದ 24 ಗಂಟೆಗಳ ನಿರಂತರ ನೇರಪ್ರಸಾರ

‘ರೇಡಿಯೋ ಶಿವಮೊಗ್ಗ ೯೦.೮ಎಫ್.ಎಂ. ಹಾಗೂ ಪರಿಸರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಕನ್ನಡ...

Breaking News ಪತಿ ಮತ್ತು ಪತಿಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆ.

Breaking News ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ವಿಷ ಸೇವಿಸಿ...

Hartalu Halappa ರಾಜ್ಯದಲ್ಲಿ ವಿದ್ಯುತ್ ಕೊರತೆ: ಸರ್ಕಾರದ ಅಸಮರ್ಥತೆ- ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಪ್ರಶ್ನೆ.

Hartalu Halappa ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ...

Shimoga Pes College ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧ ಮಂಡನೆ: ಎಂಬಿಎ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ.

Shimoga Pes College ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ ಪಿಇಎಸ್‌ಐಟಿ‌ಎಂ...