ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2026-27ನೇ ಸಾಲಿಗೆ ವಿವಿಧ ಯೋಜನೆಗಳಡಿ ಪ್ರವರ್ಗ-ಎ ಆದಿಜಾಂಬವ ಅಭಿವೃದ್ಧಿ ನಿಗಮ, ಪ್ರವರ್ಗ-ಬಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಪ್ರವರ್ಗಗಳ ಎ ಮತ್ತು ಬಿ ಉಪಜಾತಿಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನವೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, 2023-24, 2024-25 ಮತ್ತು 2025-26ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಈಗಾಗಲೇ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ನಿಗಮದ ವಿವಿಧ ಆರ್ಥಿಕ ಯೋಜನೆಗಳಾದ ನೇರಸಾಲ ಯೋಜನೆ, ಹೈನುಗಾರಿಕೆ, ಕುರಿ ಸಾಕಾಣಿಕೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೇಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಮೈಕ್ರೋಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಶಿವಮೊಗ್ಗ1, ಗ್ರಾಮ1, ಕರ್ನಾಟಕ1 ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ https://sevaone.karnataka.gov.in/services/ ಅಥವಾ ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ಜಿಲ್ಲಾ ಪಂಚಾಯತ್ ಕಾರ್ಯಾಲಯದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ತಿಳಿಸಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ಆರ್ಥಿಕ ಯೋಜನೆಗಳಿಗೆ ಅರ್ಜಿ ಆಹ್ವಾನ
Date:
