ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರು 2026-27ನೇ ಸಾಲಿನಲ್ಲಿ ಆರ್ಥಿಕ ಅಭಿವೃದ್ಧಿ ಹೊಂದಲು ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ರೂ.2.00 ಲಕ್ಷ ಮೊತ್ತದ ಉದ್ಯಮ ಶೀಲತಾ ಯೋಜನೆ, ರೂ.4.00 ಲಕ್ಷ ಮೊತ್ತದ ಸ್ವಾವಲಂಬಿ ಸಾರಥಿ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಹ ಫಲಾಪೇಕ್ಷಿಗಳು ಸೇವಾ ಸಿಂಧೂ ಪೋರ್ಟಲ್ ಮೂಲಕ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ನವೆಂಬರ್ 30 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ, ಪಂಗಡಗಳ ಅಲೆಮಾರಿ ಸಮುದಾಯದವರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Date:
